Nikhil Kumaraswamy : ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಅಪ್ಪಾಜಿ ಕ್ಯಾಂಟೀನ್ ಗೆ ನಿಖಿಲ್ ಕುಮಾರಸ್ವಾಮಿ ಭೇಟಿ
1 min read
ಬೆಂಗಳೂರು : ಇಂದು ಮಾಜಿ ಪ್ರಧಾನಿ , ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡ ಅವರ ಹುಟ್ಟುಹಬ್ಬ.. ಈ ಪ್ರಯುಕ್ತ ನಟ ಹಾಗೂ ಯುವ ರಾಜಕಾರಣಿ (ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ) ನಿಖಿಲ್ ಕುಮಾರಸ್ವಾಮಿ ಅಪ್ಪಾಜಿ ಕ್ಯಾಂಟೀನ್ ಗೆ ಭೇಟಿ ನೀಡಿದ್ದರು..
ಬೆಂಗಳೂರಿನ ಹನುಮಂತನಗರದಲ್ಲಿರುವ ಅಪ್ಪಾಜಿ ಕ್ಯಾಂಟೀನ್ ಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದ್ದರು. ಈ ವೇಳೆ ಕ್ಯಾಂಟೀನ್‌ಗೆ ಬಂದ ಗ್ರಾಹಕರಿಗೆ ಉಪಚರಿಸಿ ಗ್ರಾಹಕರಿಗೆ ಊಟ ಬಡಿಸಿದ್ದಾರೆ..
ಕ್ಯಾಂಟೀನ್ ನಲ್ಲಿ ಕೇಕ್ ಕತ್ತರಿಸಿ ದೇವೇಗೌಡರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗಿದ್ದು ವಿಶೇಷ.. ಇನ್ನೂ ಮಧ್ಯಾಹ್ನದ ಊಟಕ್ಕೆ ರಾಗಿಮುದ್ದೆ ಸವಿದರು. ಬಳಿಕ ಕ್ಯಾಂಟೀನ್ ಸಿಬ್ಬಂದಿಗಳ ಜೊತೆ ಕೆಲಹೊತ್ತು ನಿಖಿಲ್ ಕುಮಾರಸ್ವಾಮಿ ಕಾಲ ಕಳೆದರು.
ದೇವೇಗೌಡರ ವಿಚಾರಗಳನ್ನ ಅರ್ಥ ಮಾಡಿಕೊಂಡು ಕಳೆದ 5 ವರ್ಷಗಳಿಂದ ಬೆಂಗಳೂರಿನಲ್ಲಿ ಕಡಿಮೆ ಹಣಕ್ಕೆ ಊಟ ವಿತರಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಆಟೋ ಚಾಲಕರು, ಕಾರ್ಮಿಕರು ಬದುಕು ಸಾಗಿಸುವುದೇ ಕಷ್ಟವಾಗಿದೆ. ಇದನ್ನು ಗಮನದಟ್ಟಿಕೊಂಡು 10 ರೂಪಾಯಿಗೆ ರಾಜ್ಯ ಜೆಡಿಎಸ್ ವಕ್ತಾರರಾದ ಟಿ.ಎ. ಶರವಣ ಅವರು ಅನ್ನದಾಸೋಹ ನಡೆಸುತ್ತಿದ್ದಾರೆ. ಇದು ಹೀಗೆಯೇ ನಿರಂತರವಾಗಿ ಮುಂದುವರೆಯಲಿ ಎಂದು ಹೇಳಿದ್ದಾರೆ.
ಈ ವೇಳೆ ವಿಧಾನ ಪರಿಷತ್ ಮಾಜಿ ಶಾಸಕರು ಹಾಗು ರಾಜ್ಯ ಜೆಡಿಎಸ್ ವಕ್ತಾರರಾದ ಟಿ.ಎ. ಶರವಣ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಾಜರಿದ್ದರು. ಇಂದು ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಅಪ್ಪಾಜಿ ಕ್ಯಾಂಟೀನ್ ನಲ್ಲಿ 1 ರೂಪಾಯಿಗೆ ಊಟ ವಿತರಿಸಲಾಗುತ್ತಿದೆ.