ಗಂಡು ಮಗುವಿಗೆ ತಂದೆಯಾದ ನಿಖಿಲ್ nikhil-kumaraswamy saaksha tv
ಬೆಂಗಳೂರು : ನಟ, ರಾಜಕಾರಣಿ ನಿಖಿಲ್ ಕುಮಾರ್ ಗಂಡು ಮಗುವಿಗೆ ತಂದೆಯಾಗಿದ್ದಾರೆ.
ದೊಡ್ಡ ಗೌಡರ ಕುಟುಂಬಕ್ಕೆ ನಿಖಿಲ್ ಕುಮಾರಸ್ವಾಮಿ ಹಾಗೂ ಪತ್ನಿ ರೇವತಿ ಗಂಡು ಮಗುವನ್ನು ಬರ ಮಾಡಿಕೊಂಡಿದ್ದಾರೆ.
ಮಗು ಆಗಮನದ ಬಗ್ಗೆ ಜೆಡಿಎಸ್ ಶಾಸಕ ಶರವಣ ಟ್ಟೀಟ್ ಮೂಲಕ ತಿಳಿಸಿದ್ದಾರೆ.
‘ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರಿಗೆ ಗಂಡು ಮಗು ಜನನವಾಗಿದೆ.
ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರ ಮರಿ-ಮೊಮ್ಮಗ ಆಗಮನ ಅತ್ಯಂತ ಸಂತೋಷ ತಂದಿರುವಂತಹ ವಿಷಯ.
ಶಿರಡಿ ಸಾಯಿಬಾಬನ ಅನುಗ್ರಹ ಮಗುವಿನ ಮೇಲಿರಲೆಂದು ಆಶಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನೀಡಿದ್ದು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ತಾಯಿ ಮಗುವಿನ ಆರೋಗ್ಯ ವಿಚಾರಿಸಿದ್ದಾರೆ.