ಬೆಂಗಳೂರು: ಸಿ.ಪಿ. ಯೋಗೇಶ್ವರ್ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಇತ್ತ ಜೆಡಿಎಸ್ ನಲ್ಲಿ ಅಭ್ಯರ್ಥಿ ಆಯ್ಕೆ ಚಟುವಟಿಕೆ ಜೋರಾಗಿದೆ. ಈ ಮಧ್ಯೆ ನಿಖಿಲ್ ಗೆ ಮಾಜಿ ಪ್ರಧಾನಿ ದೇವೇಗೌಡ ಬುಲಾವ್ ನೀಡಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಕಳೆದ ಎರಡೂ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಕುಮಾರಣ್ಣನನ್ನು (Channapatna) ಜನರು ಗೆಲ್ಲಿಸಿದ್ದಾರೆ. ಇದು ಕುಮಾರಣ್ಣ ಅವರ ಸ್ವಕ್ಷೇತ್ರ. ದೆಹಲಿಯ ಬಿಜೆಪಿ ನಾಯಕರು ಕುಮಾರಸ್ವಾಮಿ ಅವರಿಗೆ ಯಾವುದೇ ರೀತಿಯ ತೀರ್ಮಾನ ತಗೊಳ್ಳಿ ಎಂದು ಹೇಳಿದ್ದಾರೆ. ಮೈತ್ರಿಗೆ ಭಂಗವಾಗಬಾರದು ಎಂದು ನಾವಿದ್ದೇವೆ. ಆದರೆ, ನಾನು ಎಲ್ಲಿಯೂ ಸ್ಪರ್ಧಿಸುತ್ತೇನೆ ಎಂದು ಹೇಳಿಲ್ಲ ಎಂದಿದ್ದಾರೆ.
ಸಾಧಕ ಬಾಧಕ ನೋಡಿಕೊಂಡು ಸ್ಪರ್ಧೆಯ ಕುರಿತು ತೀರ್ಮಾನ ಕೈಗೊಳ್ಳುತ್ತೇವೆ. ನಮಗೆ ಸ್ವಾತಂತ್ರ್ಯ ಇದ್ದಾಗಿಯೂ ನಾವು ಅಭ್ಯರ್ಥಿ ಘೋಷಣೆ ಮಾಡಿಲ್ಲ. ರಾಷ್ಟ್ರೀಯ ನಾಯಕರಿಗೆ ಗೌರವ ಕೊಡಬೇಕು ಎಂಬ ಕಾರಣಕ್ಕೆ ನಾವು ಘೋಷಣೆ ಮಾಡಿರಲಿಲ್ಲ. ಯೋಗೀಶ್ವರ್ ವಿಚಾರದಲ್ಲಿ ನಾವು ದೊಡ್ಡ ಔದಾರ್ಯತೆ ತೋರಿದ್ದೇವೆ. ನಮ್ಮ ನಾಯಕರು ಯೋಗೇಶ್ವರ್ ಅವರಿಗೆ ಆಹ್ವಾನ ಕೊಟ್ಟಿದ್ದಾರೆ. ಆದರೆ, ಅವರು ತಿರಸ್ಕರಿಸಿದರು ಎಂದಿದ್ದಾರೆ.