ಬೆಂಗಳೂರು: ಚನ್ನಪಟ್ಟಣದ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯನ್ನು (Nikhil Kumaraswamy) ಘೋಷಿಸಲಾಗಿದೆ.
ಈ ಕುರಿತು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೆಸರು ಅಂತಿಮಗೊಳಿಸಿದ್ದಾರೆ. ಈ ವೇಳೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಎನ್ ಡಿಎ ಪಕ್ಷಕ್ಕೆ ಹಾಗೂ ನಿಖಿಲ್ ಕುಮಾರಸ್ವಾಮಿ ಮೇಲೆ ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ಇದೆ. ಮೋದಿಯವರ ಪಕ್ಷದಿಂದ ಬೆಂಬಲ ಇರುವ ಕಾರಣ ಅವರಿಗೆ ಗೆಲುವು ಖಚಿತ. ಕುಮಾರಸ್ವಾಮಿ, ಅಶೋಕ್ ಸೇರಿದಂತೆ ಎಲ್ಲ ಮುಖಂಡರು ಒಗ್ಗಟ್ಟಾಗಿ ನಿಖಿಲ್ ಗೆಲುವಿಗಾಗಿ ಶ್ರಮಿಸಲಾಗುವುದು ಎಂದಿದ್ದಾರೆ.
ನಿಖಿಲ್ ಕುಮಾರಸ್ವಾಮಿಯವರು ನೂರಕ್ಕೆ ನೂರು ಗೆಲ್ಲುವ ವಿಶ್ವಾಸವಿದೆ. ಆ ನಿಟ್ಟಿನಲ್ಲಿ ಎನ್ಡಿಎ ಪಕ್ಷಗಳಾದ ಬಿಜೆಪಿ- ಜೆಡಿಎಸ್ ಪಕ್ಷಗಳ ಎಲ್ಲಾ ಪ್ರಮುಖರು ಒಟ್ಟಾಗಿ ಅಲ್ಲಿ ಪ್ರವಾಸ ಮಾಡುತ್ತೇವೆ. ಈ ಚುನಾವಣೆ ಮೂಲಕ ನಂಬಿಕೆ ದ್ರೋಹಿಗಳಿಗೆ ಜನ ಪಾಠ ಕಲಿಸುತ್ತಾರೆ. ನಾನು ಬೇರೆಯವರ ಬಗ್ಗೆ ಒಂದು ಶಬ್ದ ಮಾತನಾಡಲು ಇಷ್ಟ ಪಡುವುದಿಲ್ಲ. ಪಕ್ಷಾಂತರ ಮಾಡಿದವರ ಬಗ್ಗೆ ಮಾತನಾಡುವ ಅಗತ್ಯ ಇಲ್ಲ ಎಂದು ಸಿ.ಪಿ. ಯೋಗೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.