Nikhil Kumaraswamy | ಕಲಾವಿದ ಕೋಟಾದ ಎಂಎಲ್ಸಿಗೆ 50 ಕೋಟಿ ಅನುದಾನ ಹೇಗೆ ಕೊಡ್ತಾರೆ
ರಾಮನಗರ : ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾರಿನ ಮೇಲೆ ಕಲ್ಲು ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಜನರ ಮೇಲೆ ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಈ ಸಂಬಂಧ ಜೆಡಿಎಸ್ ಯುವಮೋರ್ಚಾ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾನತಾಡಿದ ನಿಖಿಲ್ ಕುಮಾರಸ್ವಾಮಿ, ಕಲಾವಿದರ ಕೋಟಾದಲ್ಲಿ ಎಂ ಎಲ್ ಸಿ ಆಗಿರುವ ಸಿ.ಪಿ.ಯೋಗೇಶ್ವರ್ ಅವರಿಗೆ 50 ಕೋಟಿ ಅನುದಾನ ಹೇಗೆ ಕೊಡ್ತಾರೆ ಎಂದು ಪ್ರಶ್ನಿಸಿದ್ದಾರೆ.
ನಮ್ಮ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ಹಾಕಿದ್ದಾರೆ, ಇದು ಸರಿಯಲ್ಲ.
ಯೋಗೇಶ್ವರ್ ಅವರ ಕಾರ್ಯಕರ್ತರ ವಿರುದ್ಧವೂ ಎಫ್ ಐಆರ್ ಹಾಕಲಿ.
ನಮ್ಮ ಕಾರ್ಯಕರ್ತರೇ ಕಲ್ಲು ಹೊಡೆದಿದ್ದಾರೆ ಎಂದು ಹೇಳುವುದಕ್ಕೆ ಯಾವ ಸಾಕ್ಷಿ ಇದೆ ಎಂದು ಗರಂ ಆದರು.