ಬೆಂಗಳೂರು: ಮತದಾರರಿಗೆ ಆಮಿಷ ನೀಡಿರುವ ಆರೋಪ ಮಾಡಿ ನಿಖಿಲ್ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ.
2023ರ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಆಮಿಷ ಆರೋಪ ಮಾಡಿದ್ದಾರೆ. ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ನಿರ್ದೇಶನ ಕೋರಿ ನಿಖಿಲ್ ಹಾಗೂ ಮತ್ತಿತರರು ಪಿಐಎಲ್ ಸಲ್ಲಿಸಿದ್ದಾರೆ. ತಂತ್ರಜ್ಙಾನ ಬಳಸಿ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಮತದಾರರಿಗೆ ಗ್ಯಾರಂಟಿ ಕಾರ್ಡ್ ನೀಡಿ ಆಮಿಷ ಒಡ್ಡಲಾಗಿದೆ. ಹೀಗಾಗಿ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಾಗುತ್ತಿಲ್ಲ. ಈ ರೀತಿ ಬೇರೆಡೆ ಆಗದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.
ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಹೈಕೋರ್ಟ್ ಗೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅರ್ಜಿ ಸಲ್ಲಿಸಿದ್ದಾರೆ. ನಿಖಿಲ್ ಅರ್ಜಿ ವಿಚಾರಣೆ ಮಾಡಿದ ಸಿಜೆ ಪಿ.ಎಸ್. ದಿನೇಶ್ ಕುಮಾರ್, ಟಿ.ಜಿ.ಶಿವಶಂಕರೇಗೌಡ ಅವರಿದ್ದ ಪೀಠವು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ.