ರಾಮನಗರ: ನಿಖಿಲ್ ಕುಮಾರಸ್ವಾಮಿ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸೋಲು ಕಂಡಿದ್ದು, ಇದರಿಂದ ಮನನೊಂದು ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಚನ್ನಪಟ್ಟಣದ (Channapatna) ಶ್ರೀರಾಂಪುರ ಗ್ರಾಮದ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಮಂಜುನಾಥ್ ಕಳೆದ 15 ವರ್ಷಗಳಿಂದಲೂ ಜೆಡಿಎಸ್ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ. ಹೀಗಾಗಿ ನಿಖಿಲ್ ಮೇಲೆ ತುಂಬಾ ಗೌರವವಿತ್ತು. ಆದರೆ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಸೋಲು ಕಂಡಿದ್ದು, ಅಭಿಮಾನಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಮಂಜುನಾಥ್ ಮಂಡ್ಯದ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಭಿಮಾನಿ ಮಂಜುನಾಥ್ ಮನೆಗೆ ಇಂದು ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ, ಆರೋಗ್ಯ ವಿಚಾರಿಸಲಿದ್ದಾರೆ.








