ಕೇರಳದಲ್ಲಿ ಮತ್ತೆ ನಿಫಾ ಆತಂಕ – ಕೋವಿಡ್ ಗು ಮುಂಚೆ ಪತ್ತೆಯಾಗಿದ್ದ ವೈರಸ್ ಗೆ ಬಾಲಕ ಬಲಿ..!
ಕೇರಳ : ಒಂದೆಡೆ ದೇವರ ನಾಡು ಕೇರಳದಲ್ಲಿ ಕೊರೊನಾ ರಣಕೇಕೆ ಹಾಕ್ತಿದೆ. ದೇಶದಲ್ಲಿ ಪತ್ತೆಯಾಗ್ತಿರುವ ಸೋಂಕು ಪ್ರಕರಣಗಳ ಪೈಕಿ ಅರ್ಧಕ್ಕಿಂತ ಹೆಚ್ಚಿನಷ್ಟು ಕೇರಳದಲ್ಲಿ ಪತ್ತೆಯಾಗ್ತಿದೆ. ಈ ನಡುವೆ ಮತ್ತೊಂದು ಆಘಾತಕಾರಿ ವಿಚಾರ ಗೊತ್ತಾಗಿದ್ದು, ಜನರು ಮತ್ತಷ್ಟು ಆತಂಕಕ್ಕೆ ಗುರಿಯಾಗಿದ್ದಾರೆ. ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಆಸ್ಪತ್ರೆಗೆ ದಾಖಲಾಗಿದ್ದ 12 ವರ್ಷದ ಬಾಲಕ ಭಾನುವಾರ ಬೆಳಗ್ಗೆ ನಿಫಾ ವೈರಸ್‍ನಿಂದಾಗಿ ಸಾವನ್ನಪ್ಪಿದ್ದಾನೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಟೀಮ್ ಇಂಡಿಯಾದ ಮುಖ್ಯ ಕೋಚ್ ರವಿ ಶಾಸ್ತ್ರಿ ಅವರಿಗೆ ಕೊರೊನಾ..!
ಪುಣೆಯ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾಗಿದ್ದ ಕೆಲವು ಮಾದರಿಗಳಿಂದ ಬಾಲಕನಿಗೆ ನಿಫಾ ವೈರಸ್ ಇರುವುದು ದೃಢಪಟ್ಟಿದೆ. ಶನಿವಾರ ರಾತ್ರಿ ಬಾಲಕನ ಸ್ಥಿತಿ ಗಂಭೀರವಾಗಿತ್ತು. ಬಾಲಕ ಇಂದು ಮುಂಜಾನೆ 5 ಗಂಟೆಗೆ ಸಾವನ್ನಪ್ಪಿದ್ದಾನೆ. ಇದೀಗ ಬಾಲಕನ ಜೊತೆ ಸಂಪರ್ಕ ಹೊಂದಿದ್ದವರನ್ನು ಪತ್ತೆ ಹಚ್ಚಲು ಸರ್ಕಾರ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಬಾಲಕನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರ ಕ್ವಾರಂಟೈನ್‍ಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಕೋವಿಡ್ ವೈರಸ್ ಗಿಂತಲೂ ಮುಂಚೆಯೇ ಈ ವೈರಸ್ ಪತ್ತೆಯಾಗಿತ್ತು ಎನ್ನಲಾಗಿದೆ.