ನಿಫಾ ವೈರಸ್ ಆತಂಕ : ದಕ್ಷಿಣ ಕನ್ನಡದಲ್ಲಿ ಹೈ ಅಲರ್ಟ್

1 min read

ನಿಫಾ ವೈರಸ್ ಆತಂಕ : ದಕ್ಷಿಣ ಕನ್ನಡದಲ್ಲಿ ಹೈ ಅಲರ್ಟ್ Nifa virus saaksha tv

ದಕ್ಷಿಣ ಕನ್ನಡ : ಕೇರಳದಲ್ಲಿ ನಿಫಾ ವೈರಸ್ ನ ಆತಂಕ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಫಾ ಅಲರ್ಟ್ ಘೋಷಣೆ ಮಾಡಲಾಗಿದೆ.

ನಿಫಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿರುವ ಜಿಲ್ಲಾಡಳಿತ, ಸದ್ಯ ರಸ್ತೆ ಮಾರ್ಗವಾಗಿ ಕಾಸರಗೋಡು, ಮಂಜೇಶ್ವರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಬರುತ್ತಿರುವವರ ಮೇಲೆ ತೀವ್ರ ನಿಗಾ ಇಟ್ಟಿದೆ.

Nifa virus  saaksha tv

ಅಲ್ಲದೆ ಅನುಮಾನ ಬಂದವರ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೂ ಸೂಚಿಸಿದೆ.

ಅಂದ್ಹಾಗೆ ಕೇರಳದಲ್ಲಿ ಭಾನುವಾರ ನಿಫಾ ವೈರಸ್ ನಿಂದಾಗಿ 12ರ ಬಾಲಕ ಕೊನೆಯುಸಿರೆಳೆದಿದ್ದು, 11 ನಿಫಾ ಕೇಸ್ ಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಬರುವವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd