ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳು ಗಲ್ಲು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ನಾನಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇದೀಗ ಮತ್ತೆ ಮರಣದಂಡನೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ವಿನಯ್ ಶರ್ಮಾ ಮತ್ತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾನೆ.
ತನ್ನ ಕ್ಷಮಾದಾನ ಅರ್ಜಿ ತಿರಸ್ಕರಿಸುವಲ್ಲಿ ರಾಷ್ಟ್ರಪತಿ ಭವನದಿಂದ ಪ್ರಕ್ರಿಯಾಲೋಪ ಹಾಗೂ ಸಾಂವಿಧಾನಿಕ ಅಕ್ರಮ ಎಸಗಲಾಗಿದೆ ಎಂದು ಅಪರಾಧಿ ದೂರಿದ್ದಾನೆ. ಅಲ್ಲದೆ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ರಾಷ್ಟ್ರಪತಿಗೆ ಕಳಿಸಿದ ಶಿಫಾರಸಿನಲ್ಲಿ ದೆಹಲಿ ಗೃಹ ಸಚಿವ ಸತ್ಯೇಂದ್ರ ಜೈನ್ರ ಸಹಿಯಿರಲಿಲ್ಲ ಎಂದು ವಿನಯ್ ಶರ್ಮಾ ಅರ್ಜಿಯಲ್ಲಿ ತಿಳಿಸಲಾಗಿದೆ.
ಕೆಲವು ದಿನಗಳ ಹಿಂದೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೆ ಅರ್ಜಿ ಸಲ್ಲಿಸಿರುವ ಶರ್ಮಾ, ಗಲ್ಲುಶಿಕ್ಷೆಯನ್ನು ಜೀವಾವಧಿಗೆ ಇಳಿಸುವಂತೆ ಕೋರಿದ್ದಾನೆ.









