ನವದೆಹಲಿ : ದೇಶದ ಜನತೆ ಏಳು ವರ್ಷಗಳಿಂದ ನಿರೀಕ್ಷಿಸುತ್ತಿದ್ದ ಕಾಲ ಕೊನೆಗೂ ಸನ್ನಿಹಿತವಾಗಿದೆ. ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಿಗೆ ನಾಳೆ ಬೆಳಗ್ಗೆ 5.30ಕ್ಕೆ ದೆಹಲಿಯ ಅತಿ ಭದ್ರತೆಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲು ಮುಹೂರ್ತ ನಿಗದಿಯಾಗಿದೆ.
ಪ್ರಕರಣದ ಅಪರಾಧಿಗಳಾದ ಮುಕೇಶ್ ಕುಮಾರ್ ಸಿಂಗ್ (32), ಪವನ್ ಗುಪ್ತ (25), ವಿನಯ್ ಕುಮಾರ್ ಶರ್ಮಾ (26), ಅಕ್ಷಯ್ ಕುಮಾರ್ (31) ಗಲ್ಲು ಶಿಕ್ಷೆಗೆ ತಡೆ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಪಟಿಯಾಲಾ ಹೌಸ್ ನ್ಯಾಯಾಲಯ ವಜಾಗೊಳಿಸಿದೆ. ಪಟಿಯಾಲ ಹೌಸ್ ಕೋರ್ಟ್ ನ್ಯಾಯಾಲಯದ ಡೆತ್ ವಾರೆಂಟ್‌ನಂತೆ ನಾಳೆ ಮುಂಜಾನೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗುವುದು ಖಚಿತವಾಗಿದೆ.
ಪಟಿಯಾಲಾ ಹೌಸ್ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ ಬಳಿಕ ಮಾತನಾಡಿದ ನಿರ್ಭಯ ತಾಯಿ ಪರ ವಕೀಲೆ ಸೀಮಾ ಕುಶ್ವಾ, “ಶುಕ್ರವಾರ ಬೆಳಗ್ಗೆ 5.30ಕ್ಕೆ ಎಲ್ಲಾ ಅಪರಾಧಿಗಳನ್ನು ಗಲ್ಲಿಗೇರಿಸುವ ವಿಶ್ವಾಸವಿದೆ” ಎಂದು ಹೇಳಿದ್ದಾರೆ.








