ನವದೆಹಲಿ : ಕೊರೊನಾ ಲಾಕ್ ಡೌನ್ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿಯ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು, ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಲ್ಕನೇ ಹಂತದಲ್ಲಿ ಪ್ಯಾಕೇಜ್ ಹಂಚಿಕೆ ಮಾಡಲಿದ್ದಾರೆ.
20 ಲಕ್ಷ ಕೋಟಿ ಪ್ಯಾಕೇಜ್ ಬಗ್ಗೆ ಈ ಹಿಂದೆ ಸುದೀರ್ಘ ಮೂರು ಹಂತಗಳ ಮಾಹಿತಿ ನೀಡಿದ್ದ ನಿರ್ಮಲಾ ಸೀತಾರಾಮನ್, ಇಂದು ಮತ್ತೆ ಸುದ್ದಿಗೋಷ್ಠಿ ಕರೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಇಂದಿನ ಸುದ್ದಿಗೋಷ್ಠಿಯಲ್ಲಿ ನಿರ್ಮಲಾ ಸೀತಾರಾಮನ್ ಅವರು, ಸುಮಾರು 2 ಲಕ್ಷ ಕೋಟಿ ಮೌಲ್ಯದ ಪ್ಯಾಕೇಜ್ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಇಂದು ದೇಶದ ಪ್ರವಾಸೋದ್ಯಮ, ಸೇವಾವಲಯ ಕೇಂದ್ರಿಕರಿಸಿ ಪ್ಯಾಕೇಜ್ ಘೋಷಣೆ ಸಾಧ್ಯತೆ ಇದೆ. ಹೋಟೆಲ್, ರೆಸ್ಟೋರೆಂಟ್, ಹೋಂ ಸ್ಟೇ, ಲಾಡ್ಜ್, ಅತಿಥಿ ಗೃಹಗಳು ಸೇರಿಸಂತೆ ಆತಿಥ್ಯ ವಲಯ, ಆಸ್ಪತ್ರೆಗಳ ಅಭಿವೃದ್ಧಿ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಘೋಷಣೆ ಆಗಲಿದೆ ಎಂದು ಹೇಳಲಾಗುತ್ತಿದೆ.
ಸಾರಿಗೆ ವ್ಯವಸ್ಥೆ ವಲಯದಡಿ ವಿಮಾನಯಾನ, ಖಾಸಗಿ ಸಾರಿಗೆ ಸಂಸ್ಥೆಗಳಿಗೆ ನೆರವು, ಚಿಲ್ಲರೆ ಮಾರುಕಟ್ಟೆ, ಶಿಕ್ಷಣ, ಸಿನಿಮಾದಂತಹ ಮನರಂಜನಾ ವಲಯಕ್ಕೂ ರಿಲೀಫ್ ನೀಡುವ ಸಾಧ್ಯತೆ ಇದೆ. ಶುಕ್ರವಾರ ಸುಮಾರು 1.5 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿರುವ ಹಣಕಾಸು ಸಚಿವಲಾಯ, ಇದಕ್ಕೂ ಮುನ್ನ ಕೇಂದ್ರ ಸರ್ಕಾರದ ಹಿಂದಿನ 1.75 ಲಕ್ಷ ಕೋಟಿ ಹಾಗೂ ಆರ್ಬಿಐ ಘೋಷಿಸಿದ್ದ ಆರ್ಥಿಕ ನೆರವುಗಳು ಒಳಗೊಂಡು 16.5 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ ಮಾಡಿತ್ತು.








