ರಾಯ್ ಪುರ : ಪ್ರಧಾನಿ ನರೇಂದ್ರ ಮೋದಿ ಅವರ 20 ಲಕ್ಷ ಕೋಟಿ ರೂಪಾಯಿಯ ವಿಶೇಷ ಆರ್ಥಿಕ ಪ್ಯಾಕೇಜ್ ನ ವಿವರಗಳನ್ನು ಕಳೆದ ಮೂರು ದಿನಗಳಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿಯ ಮೂಲಕ ನೀಡುತ್ತಿದ್ದಾರೆ.
ಈ ಬಗ್ಗೆ ಛತ್ತೀಸ್ ಗಢ ಸಿಎಂ ಭೂಪೇಶ್ ಬಾಗೇಲ್ ಟೀಕೆ ಮಾಡಿದ್ದು, ಮೇ 13 ರಿಂದ ಪ್ರತಿದಿನ ನಿರ್ಮಲಾ ಸೀತಾರಾಮನ್ ನಡೆಸುತ್ತಿರುವ ಸುದ್ದಿಗೋಷ್ಠಿಗಳು ”ದೈನಂದಿನ ಧಾರಾವಾಹಿ ರೀತಿ ಆಗಿದೆ” ಎಂದಿದ್ದಾರೆ.
ವಿಶೇಷ ಪ್ಯಾಕೇಜ್ ಬಗ್ಗೆ ಬಾಗೇಲ್ ಹೇಳಿದ್ದೇನು..?
”ಪ್ರಧಾನ ಮಂತ್ರಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಘೋಷಿಸಿದಾಗ ತುಂಬಾ ಸ್ಪಷ್ಟವಾಗಿ ಅದನ್ನ ತಿಳಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಕಳೆದ ಮೂರು ದಿನಗಳಿಂದ ನಿರ್ಮಲಾ ಸೀತಾರಾಮನ್ ಮತ್ತು ಅನುರಾಗ್ ಸಿಂಗ್ ಠಾಕೂರ್ ಅವರ ಸೀರಿಯಲ್ ನಡೆಯುತ್ತಿದೆ. ಪ್ರತಿ ಕ್ಷೇತ್ರದ ಬಗ್ಗೆ ಇಬ್ಬರೂ ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ವಿವರಿಸುತ್ತಿದ್ದಾರೆ. ಆದರೆ, ಅದು ಯಾರಿಗೂ ಅರ್ಥವಾಗುತ್ತಿಲ್ಲ ಅನಿಸುತ್ತಿದೆ”.
”ಸೀರಿಯಲ್ ಮುಗಿದ ಬಳಿಕವಷ್ಟೇ ಪ್ಯಾಕೇಜ್ ಬಗ್ಗೆ ಮಾತನಾಡಬಹುದು. ಪಿಕ್ಚರ್ ಇನ್ನೂ ಬಾಕಿ ಇದೆ” ಎಂದು ಭೂಪೇಶ್ ಬಾಗೇಲ್ ಹೇಳಿದ್ದಾರೆ.








