ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ಬಜೆಟ್ ಮಂಡಿಸಲಿದ್ದಾರೆ.
ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಇದಾಗಲಿದೆ. ಸರ್ಕಾರ ರಚನೆಯಾಗುವವರೆಗೆ ಮಧ್ಯಂತರ ಬಜೆಟ್ (Union Budget 2024) ಮಧ್ಯಂತರ ಅವಧಿಯ ಹಣಕಾಸಿನ ಅಗತ್ಯಗಳನ್ನು ನೋಡಿಕೊಳ್ಳುತ್ತದೆ.
ಈಗಾಗಲೇ ಸಂಸತ್ ಆರಂಭವಾಗಿದೆ. ರಾಷ್ಟ್ರಪತಿ ಮುರ್ಮು ಅವರು ತಮ್ಮ ಭಾಷಣದಲ್ಲಿ 2023 ದೇಶಕ್ಕೆ ಐತಿಹಾಸಿಕ ವರ್ಷವಾಗಿದೆ. ಏಪ್ರಿಲ್‌ನಲ್ಲಿ ಆರಂಭವಾಗಲಿರುವ 2024-25 ರ ಹಣಕಾಸು ವರ್ಷದಲ್ಲಿ ಆರ್ಥಿಕತೆಯು ಶೇ.7 ರ ಹತ್ತಿರಕ್ಕೆ ಬರುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವಾಲಯವು ಪರಿಶೀಲನಾ ವರದಿಯಲ್ಲಿ ಹೇಳಿದೆ.