ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿ ರಾಷ್ಟ್ರದ ಜನರಲ್ಲಿ ಸ್ವದೇಶಿ ಉತ್ಪನ್ನಗಳನ್ನು ಖರೀದಿಸುವಂತೆ ಹಾಗೂ ಅದನ್ನು ಪ್ರಚಾರ ಮಾಡುವಂತೆ ಹೇಳಿದ್ದರು ಮತ್ತು ದೇಶದ ಆರ್ಥಿಕ ಸುಭದ್ರತೆ, ಸುಧಾರಣೆ ಮತ್ತು ಜನರ ಕಲ್ಯಾಣಕ್ಕಾಗಿ 20 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದರು. ವಿಶೇಷ ಪ್ಯಾಕೇಜ್ ಬಗ್ಗೆ ಹಣಕಾಸು ಸಚಿವರು ಮಾಹಿತಿ ನೀಡಲಿದ್ದಾರೆ ಎಂದೂ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿಯನ್ನು ನಡೆಸಲಿದ್ದಾರೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ದೇಶದ ಅರ್ಥಿಕತೆ ಕುಸಿದಿದ್ದು, ಅರ್ಥಿಕ ಚೇತರಿಕೆಗಾಗಿ ಪ್ರಧಾನಿಯವರು 20 ಲಕ್ಷ ಕೋಟಿ ಮೊತ್ತದ ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಪ್ಯಾಕೇಜ್ ಕುರಿತಂತೆ ಸಂಪೂರ್ಣ ವಿವರಣೆಯನ್ನು ನೀಡಲಿದ್ದಾರೆ. ಬಡವರು, ರೈತರು, ಮಧ್ಯಮ ವರ್ಗದ ಜನರಿಗೆ, ಕಾರ್ಮಿಕರಿಗೆ, ಕೈಗಾರಿಕೆಗಳಿಗೆ ಈ ವಿಶೇಷ ಪ್ಯಾಕೇಜ್ ನಲ್ಲಿ ಲಾಭ
ಸಿಗಲಿದೆ ಎಂದು ಹೇಳಲಾಗುತ್ತಿದೆ. ಸುದ್ದಿಗೋಷ್ಠಿಯಲ್ಲಿ ಸಚಿವೆ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಲಾಗುತ್ತದೆ ಎಂಬ ವಿಷಯಗಳ ಬಗ್ಗೆ ಸವಿವರ ಮಾಹಿತಿ ನೀಡುವರು ಎಂದು ಹೇಳಲಾಗುತ್ತಿದ್ದು, ಜನರ ಚಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನಡೆಸಲಿರುವ ಸುದ್ದಿಗೋಷ್ಠಿಯತ್ತ ನೆಟ್ಟಿದೆ.
ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕತ್ವದ ದ್ವಂದ್ವ ನಿಲುವನ್ನು ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ತೀವ್ರವಾಗಿ ತರಾಟೆಗೆ...








