ನವದೆಹಲಿ : ಬಿಹಾರ ವಿಧಾನಸಭಾ ಚುನಾವಣೆ ನಂತರ ಮತ್ತೊಮ್ಮೆ ನಿತೀಶ್ ಕುಮಾರ್ (Nithish Kumar) ಅವರೇ ಮುಖ್ಯಮಂತ್ರಿಯಾಗುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ( Amith shah ) ಹೇಳಿದ್ದಾರೆ.
ನಿನ್ನೆ ಸುದ್ದಿ ವಾಹಿನಿಯೊಂದರಲ್ಲಿ ಜೆಡಿಯುಗಿಂತ ಬಿಜೆಪಿಗೆ ಹೆಚ್ಚಿನ ಸೀಟು ಬಂದರೆ ಮುಖ್ಯಮಂತ್ರಿ ಯಾರಾಗುತ್ತಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟ ಅಮಿತ್ ಶಾ, ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ ಸಿಗಲಿದೆ.
ಇದನ್ನೂ ಓದಿ : ಕೋವಿಡ್ -19 ವಿರುದ್ಧದ ಹೋರಾಟದಲ್ಲಿ ಮುಂದಿನ ಎರಡೂವರೆ ತಿಂಗಳು ನಿರ್ಣಾಯಕ – ಹರ್ಷ್ ವರ್ಧನ್
ಇಲ್ಲಿ ಅವರಲ್ಲದಿದ್ದರೆ ಯಾರು, ಆದರೆ ಎಂಬ ಸಂಶಯವೇ ಇಲ್ಲ. ನಿತೀಶ್ ಕುಮಾರ್ ಅವರೇ ಬಿಹಾರದ ಮುಂದಿನ ಮುಖ್ಯಮಂತ್ರಿ ಎಂದು ಸ್ಪಷ್ಟನೆ ನೀಡಿದ್ದಾರೆ.
ಬಳಿಕ ಬಿಹಾರದಲ್ಲಿ ಆಡಳಿತಾರೂಢ ಪಕ್ಷದಿಂದ ಲೋಕ ಜನಶಕ್ತಿ ಪಕ್ಷ ಮೈತ್ರಿ ಮುರಿದುಕೊಂಡಿರುವ ಬಗ್ಗೆ ಮಾತನಾಡಿದ ಶಾ, ಪಕ್ಷಕ್ಕೆ ಸಾಕಷ್ಟು ಸೀಟುಗಳನ್ನು ನೀಡುವುದಾಗಿ ಹೇಳಲಾಗಿತ್ತಾದರೂ ಮೈತ್ರಿ ಕಡಿದುಕೊಂಡು ಹೋಗಿದೆ.
ಫ್ಲಿಪ್‌ಕಾರ್ಟ್ ಮತ್ತು ಅಮೆಜಾನ್‌ಗೆ ಸರ್ಕಾರದಿಂದ ನೋಟಿಸ್
ಇದು ಅವರ(ಎಲ್ ಜೆಪಿ) ತೀರ್ಮಾನ, ನಮ್ಮದಲ್ಲ ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










