Nitin gadkari | ರಾಜ್ಯದಲ್ಲಿ 5 ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಚಾಲನೆ!
ಬೆಳಗಾವಿ : ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಬೆಳಗಾವಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.
ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಿಮೋಟ್ ಒತ್ತುವುದರ ಮೂಲಕ 5 ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಚಾಲನೆ ನೀಡಿದ್ದಾರೆ.
ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ
- ಬೆಳಗಾವಿ-ಸಂಕೇಶ್ವರ
2.ಸಂಕೇಶ್ವರ-ಮಹಾರಾಷ್ಟ್ರ ಷಟ್ಪಥ ರಸ್ತೆ
- ಚೋರ್ಲಾ-ಜಾಂಬೋಟಿ-ಬೆಳಗಾವಿ ನಡುವಿನ ದ್ವಿಪಥ ರಸ್ತೆ
- ವಿಜಯಪುರ-ಮುರಗುಂಡಿ(ಎನ್.ಎಚ್-548ಬಿ),
- ಸಿದ್ದಾಪುರ-ವಿಜಯಪುರ(ಎನ್.ಎಚ್-561ಎ) ಕಾಮಗಾರಿಗೆ ಚಾಲನೆ ನೀಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ , ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ , ಸಚಿವರು, ಸ್ಥಳೀಯ ಶಾಸಕರು ಭಾಗಿಯಾಗಿದ್ದಾರೆ. Nitin gadkari Foundation stone laying of 5 NH projects