ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ನಿತಿನ್ ನಬಿನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆಗಳೊಂದಿಗೆ ಶ್ಲಾಘಿಸಿದ್ದಾರೆ. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ನಿತಿನ್ ನಬಿನ್ ನನ್ನ ಬಾಸ್. ನಾನು ಕೇವಲ ಬಿಜೆಪಿಯ ಒಬ್ಬ ಕಾರ್ಯಕರ್ತ ಮಾತ್ರ ಎಂದು ವಿನಮ್ರತೆಯಿಂದ ಹೇಳಿದ್ದು, ರಾಜಕೀಯ ವಲಯದಲ್ಲಿ ಸಾಕಷ್ಟು ಗಮನ ಸೆಳೆದಿದೆ.
ಪಕ್ಷದ ಸಂಘಟನೆ ಮತ್ತು ವಿಚಾರಧಾರೆಯ ವಿಷಯ ಬಂದಾಗ ನಿತಿನ್ ನಬಿನ್ ಅವರೇ ನಾಯಕತ್ವ ವಹಿಸಿಕೊಳ್ಳುತ್ತಾರೆ ಎಂದು ಪ್ರಧಾನಿ ಮೋದಿ ತಿಳಿಸಿದರು. ನಿತಿನ್ ನಬಿನ್ ಅವರು ಬಿಜೆಪಿ ಪರಂಪರೆಯನ್ನು ಮುಂದುವರಿಸುವ ಮಿಲೇನಿಯಲ್ ನಾಯಕ ಎಂದು ಬಣ್ಣಿಸಿದ ಪ್ರಧಾನಿ, ಯುವ ಶಕ್ತಿಯ ಪ್ರತಿನಿಧಿಯಾಗಿ ಅವರು ಪಕ್ಷಕ್ಕೆ ಹೊಸ ಚೈತನ್ಯ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದುವರೆಗೂ ನವೀನ್ ಅವರಿಗೆ ವಹಿಸಲಾಗಿದ್ದ ಎಲ್ಲ ಜವಾಬ್ದಾರಿಗಳನ್ನು ಅವರು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎಂದು ಹೇಳಿದ ಪ್ರಧಾನಿ ಮೋದಿ,
ಈ ಹೊಸ ಮಹತ್ವದ ಹೊಣೆಗಾರಿಕೆಯನ್ನು ಕೂಡ ನಿತಿನ್ ನಬಿನ್ ಸಮರ್ಥವಾಗಿ ನಿಭಾಯಿಸುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಈ ಹೇಳಿಕೆಯಿಂದ ಬಿಜೆಪಿ ಒಳಗೆ ನಾಯಕತ್ವ ಬದಲಾವಣೆ ಕುರಿತು ಧನಾತ್ಮಕ ಸಂದೇಶ ರವಾನೆಯಾಗಿದ್ದು, ಪಕ್ಷದ ಮುಂದಿನ ರಾಜಕೀಯ ದಿಕ್ಕು ಹಾಗೂ ಸಂಘಟನೆಗೆ ಹೊಸ ಶಕ್ತಿ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಪ್ರಧಾನಿ ಮೋದಿ ಅವರ ಈ ಮಾತುಗಳು ನಿತಿನ್ ನಬಿನ್ ಅವರ ರಾಜಕೀಯ ಮಹತ್ವ ಮತ್ತು ವಿಶ್ವಾಸಾರ್ಹತೆಯನ್ನು ಮತ್ತಷ್ಟು ಹೆಚ್ಚಿಸಿದೆ.








