ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪದಗ್ರಹಣ
ಪಾಟ್ನಾ : ಸತತ ನಾಲ್ಕನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇಬ್ಬರು ಉಪ ಮುಖ್ಯಮಂತ್ರಿಗಳಾಗಿ ತಾರ್ ಕಿಶೋರ್ ಮತ್ತು ರೇಣು ದೇವಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಅಕ್ಟೋಬರ್ 28ರಿಂದ ಮೂರು ಹಂತಗಳಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ನೇತೃತ್ವದ ಎನ್ಡಿಎ ಒಕ್ಕೂಟ, ಆರ್ಜೆಡಿ-ಕಾಂಗ್ರೆಸ್-ಎಡಪಕ್ಷಗಳ ನೇತೃತ್ವದ ಮಹಾ ಮೈತ್ರಿಕೂಟದ ಎದುರು ಜಯಶಾಲಿಯಾಗಿತ್ತು.
ರಾಜ್ಯದಲ್ಲಿ ಲಿಂಗಾಯತರಿಗೆ ಶೇ.16ರಷ್ಟು ಮೀಸಲಾತಿ ನೀಡಿ : ಎಂ.ಬಿ.ಪಾಟೀಲ್
ಎನ್ಡಿಎಗೆ ಸ್ಪಷ್ಟ ಬಹುಮತ ಸಿಗುತ್ತಿದ್ದಂತೆಯೇ ನಿತೀಶ್ ಕುಮಾರ್ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಹೊಸ ಸರ್ಕಾರದ ರಚನೆಗೆ ಮುಂದಾಗಿದ್ದರು.
ಅದರಂತೆ ಅವರು ಸತತ ನಾಲ್ಕನೆಯ ಬಾರಿಗೆ ಪದಗ್ರಹಣ ಮಾಡಿದ್ದಾರೆ.
ಪಟನಾದಲ್ಲಿರುವ ರಾಜಭವನದಲ್ಲಿ ಪ್ರಮಾಣ ವಚನ ಸಮಾರಂಭ ನಡೆದಿದ್ದು, ಅವರ ಜತೆಗೆ ಸಚಿವ ಸಂಪುಟದ ಕೆಲವು ಸಹೋದ್ಯೋಗಿಗಳೂ ಪ್ರಮಾಣ ವಚನ ಸ್ವೀಕರಿಸಿದರು. ಬಿಹಾರ ರಾಜ್ಯಪಾಲ ಫಾಗು ಚೌಹಾನ್ ಪ್ರಮಾಣ ವಚನ ಭೋದಿಸಿದರು.
ಮರಾಠ ಪ್ರಾಧಿಕಾರ ರಚನೆ | ಸಮಾಜ ಒಡೆಯೋ ಕೆಲಸ ಯಾಕೆ.?
ಈ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









