Nitish Kumar
ಪಟ್ನಾ: ಸತತ 3 ಬಾರಿ ಬಿಹಾರದ ಸಿಎಂ ಆಗಿ ಆಡಳಿತ ನಡೆಸಿರುವ ನಿತೀಶ್ ಕುಮಾರ್ ಅವರು ಇದೀಗ ನಾಲ್ಕನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ದಿನಾಂಕ ಮುಹೂರ್ತ ಫಿಕ್ಸ್ ಆಗಿದೆ ಎನ್ನಲಾಗಿದೆ. ಹೌದು ಮುಂದಿನವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಆದ್ರೆ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎನ್ನಲಾಗುತ್ತಿದೆ.
ಸತತ ಆರ್ಥಿಕ ಹಿಂಜರಿತ | `ಈ ಸಾಧನೆ ಮಾಡಿದ ಮೊದಲ ಪ್ರಧಾನಿ ಮೋದಿ’
ಇನ್ನೂ ಭಾಯ್ ದೂಜ್ ಹಬ್ಬದ ದಿನವೇ (ಸೋಮವಾರ) ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ದಟ್ಟವಾಗಿದೆ. ಇದೆ. ಇತ್ತ ಸೋಮವಾರ ಪ್ರಮಾಣ ವಚನ ಸ್ವೀಕರಿಸುವ ಬಗ್ಗೆ ಇದುವರೆಗೂ ರಾಜಭವನಕ್ಕೆ ಮಾಹಿತಿ ಬಂದಿಲ್ಲ ಎಂದು ಮೂಲಗಳು ತಿಳಿಸಿವೆ. ಈ ನಡುವೆ, ನಿತೀಶ್ ಅವರು ಗುರುವಾರ ಸಂಜೆ ವೇಳೆ ಪಕ್ಷದ ಕೇಂದ್ರ ಕಚೇರಿಗೆ ಭೇಟಿ ನೀಡಿ ಹೊಸದಾಗಿ ಆಯ್ಕೆಯಾಗಿರುವ ಶಾಸಕರ ಜತೆಗೆ ಮಾತುಕತೆ ನಡೆಸಲಿದ್ದಾರೆ. ಬಿಜೆಪಿ ನಾಯಕರು ಈಗಾಗಲೇ ನಿತೀಶ್ ಕುಮಾರ್ ಅವರನ್ನೆ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿರುವ ಕಾರಣ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಸುಲಭವಾಗಿದೆ. ಆದ್ರೆ ಅಧಿಕೃತ ಘೋಷಣೆ ಇನ್ನೂ ಬಾಕಿಯಿದೆ.
ಇನ್ನೂ ಈ ಬಾರಿ ನಡೆದ ಚುನಾವಣೆಯಲ್ಲಿ ಎನ್ ಡಿಎ ಜಯಭೇರಿ ಬಾರಿಸಿತ್ತು. ಆದರೆ ಎನ್ ಡಿಎ ಒಳಗೆ ನೋಡೋದಾದ್ರೆ ಜೆ ಡಿಯುಗಿಂತಲೂ ಬಿಜೆಪಿಗೆ ಬಹುಮತ ಸಿಕ್ಕಿತ್ತು. ಹೀಗಾಗಿ ಸಿಎಂ ಬದಲಾವಣೆಗಳ ಬಗ್ಗೆ ಗೊಂದಲಗಳು ಆರಂಭವಾಗಿತ್ತು. ಆದ್ರೆ ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಬಿಜೆಪಿ ನಾಯಕ ಸುಶೀಲ್ ಮೋದಿ ಅವರು ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆಯಿಲ್ಲ. ನಿತೀಶ್ ಕುಮಾರ್ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಎಲ್ಲಾ ಊಹಾಪೋಹಗಳಿಗೂ ತೆರೆ ಎಳೆದಿದ್ದರು.
Nitish Kumar
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel