ಇತ್ತೀಚೆಗೆ ಕನ್ನಡದ ‘ಮೈನಾ’ ನಟಿ ನಿತ್ಯಾ ಮೆನನ್ ಸಾಕಷ್ಟು ಪಚರ್ಚೆಯಲ್ಲಿದ್ದಾರೆ.. ಕನ್ನಡ , ತಮಿಳು , ತೆಲುಗು , ಮಲಯಾಳಂ ಹೀಗೆ ಬಹುಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ನಟಿ ಮಾಲಿವುಡ್ ಸ್ಟಾರ್ ನಟನ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಹರಿದಾಡ್ತಿದೆ..
ಆದ್ರೆ ಈ ಎಲ್ಲಾ ವದಂತಿಗಳಿಗೆ ನಟಿ ನಿತ್ಯಾ ಸ್ಪಷ್ಟನೆ ನೀಡಿದ್ದಾರೆ..
ತಾವು ಯಾರೊಂದಿಗೂ ಡೇಟಿಂಗ್ ಮಾಡಿಲ್ಲ, ಯಾವ ಸ್ಟಾರ್ ನಟನನ್ನೂ ಮದುವೆ ಆಗುತ್ತಿಲ್ಲ ಎಂದು ನಿತ್ಯಾ ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ..
ಅಲ್ಲದೇ ಮದುವೆ ಆಗುವ ಬಗ್ಗೆ ಯೋಚನೆ ಕೂಡ ಮಾಡಿಲ್ಲ. ಮದುವೆಯಾಗುವಷ್ಟು ಸಲುಗೆಯನ್ನು ಯಾರೊಂದಿಗೂ ನಾನು ಇಟ್ಟುಕೊಂಡಿಲ್ಲ. ಅನೇಕ ಸ್ಟಾರ್ ನಟರು ಆತ್ಮೀಯರಾಗಿದ್ದಾರೆ. ಹಾಗಂತ ಅವರನ್ನು ಮದುವೆ ಆಗುತ್ತಿದ್ದೇನೆ ಎನ್ನುವುದು ಸುಳ್ಳು. ನಾನು ನನ್ನ ಕೆಲಸದಲ್ಲಿ ಬ್ಯುಸಿ ಆಗಿದ್ದೇನೆ.. ಮದುವೆ ಆಗುವುದು ದೂರದ ಮಾತು ಎಂದು ಸ್ಪಷ್ಟನೆ ನೀಡಿದ್ದಾರೆ..
ಕನ್ನಡದ ಜೋಷ್ ಸಿನಿಮಾದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ್ದ ನಿತ್ಯಾ ಬಹುಭಾಷೆಗಳಲ್ಲಿ ಸ್ಟಾರ್ ಗಳ ಜೊತೆಗೆ ತೆರೆ ಹಂಚಿಕೊಂಡಿದ್ದಾರೆ..