nivar cyclone
ದಕ್ಷಿಣ ಭಾರತದ ರಾಜ್ಯಗಳ ಮೇಲೆ ಅಪ್ಪಳಿಸಲಿದೆ ‘ನಿವಾರ್’ ಚಂಡಮಾರುತ
ನವದೆಹಲಿ: ದಕ್ಷಿಣ ಭಾರತದ ರಾಜ್ಯಗಳ ಮೇಲೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ಮತ್ತೆ ದಕ್ಷಿಣ ಭಾರತದ ರಾಜ್ಯಗಳು ಅದ್ರಲ್ಲೂ ಕರಾವಳಿ ಬಾಗಗಳಲ್ಲಿ ವರುಣನ ಆರ್ಭಟವಾಗಲಿದೆ ಎನ್ನಲಾಗಿದೆ. ಮುಂಗಾರು ಅವಧಿ ಮುಗಿದ ಬಳಿಕವೂ ಸತತ ವಾಯುಭಾರ ಕುಸಿತದಿಂದ ಚಂಡಮಾರುತದ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿ ಅವಾಂತರ ಸೃಷ್ಟಿಮಾಡಿದೆ. ಇದೀಗ ನಿವಾರ್ ಚಂಡಮಾರುತವು ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗುತ್ತಿದ್ದು, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದ ಅನೇಕ ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ನವೆಂಬರ್ 25ರಂದು ಕರೈಕಲ್, ಪುದುಚೆರಿಯಲ್ಲಿ, ನ. 25 ಮತ್ತು 26ರಂದು ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಮತ್ತು ರಾಯಲಸೀಮೆ, ವಿಶಾಖಪಟ್ಟಣಂ ಮತ್ತು ಪೂರ್ವ ಗೋದಾವರಿ ಜಿಲ್ಲೆಗಳಲ್ಲಿಯೂ ಮಳೆರಾಯ ಅಬ್ಬರಿಸಿ ಬೊಬ್ಬಿರಿಯಲಿದ್ದಾನೆ ಎನ್ನಲಾಗಿದೆ. ಅಲ್ಲದೇ ನಿವಾರ್ ಪರಿಣಾಮ ಬೆಂಗಳೂರಿನ ಮೇಲೆಯೂ ಉಂಟಾಗಬಹುದು ಎಂಬ ಆತಂಕಕಾರಿ ವಿಚಾರ ಬಹಿರಂಗವಾಗಿದೆ.
ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತವು ತಮಿಳುನಾಡಿನ ಚೆನ್ನೈ ಸೇರಿದಂತೆ ಅನೇಕ ಭಾಗಗಳಲ್ಲಿ ವ್ಯಾಪಕ ಮಳೆ ಸುರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ತಮಿಳುನಾಡು ಕರಾವಳಿಯತ್ತ ಸಾಗುತ್ತಿರುವ ಈ ಚಂಡಮಾರುತಕ್ಕೆ ನಿವಾರ್ ಎಂದು ಹೆಸರು ನೀಡಲಾಗಿದೆ. ಕರೈಕಲ್ ಮತ್ತು ಮಹಾಬಲಿಪುರಂ ನಡುವೆ ನವೆಂಬರ್ 25ರಂದು ಚಂಡಮಾರುತ ಹಾದುಹೋಗಲಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸುರಿಯುವ ಸಂಭವವಿದೆ.
ನಿವಾರ್ ಚಂಡಮಾರುತವು ಶ್ರೀಲಂಕಾದ ಉತ್ತರ ಭಾಗ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯತ್ತ ಪಶ್ಚಿಮದಿಂದ ಚಲಿಸುತ್ತಿದೆ. ಹೀಗಾಗಿ ಈ ಭಾಗಗಳಲ್ಲಿ ನವೆಂಬರ್ 23 ರಿಂದ 26ರವರೆಗೂ ದಕ್ಷಿಣ ಬಾರತದ ಅನೇಕ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ ನವೆಂಬರ್ 22 ರಿಂದ 25ರವರೆಗೆ ಹಿಂದೂ ಮಹಾಸಾಗರ, ದಕ್ಷಿಣ ಬಂಗಾಳ ಕೊಲ್ಲಿಯ ಕೇಂದ್ರ ಭಾಗಗಳ ಪ್ರದೇಶಗಳಲ್ಲಿ ಮತ್ತು ಬಂಗಾಳ ಕೊಲ್ಲಿಯ ಪಶ್ಚಿಮ ಕೇಂದ್ರ, ಮನ್ನಾರ್ ಕೊಲ್ಲಿ, ತಮಿಳುನಾಡಿನ ಕರಾವಳಿ, ಪುದುಚೆರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲಿ ಮೀನುಗಾರಿಕೆಯ ಸಾಹಸಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
nivar cyclone
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








