ನಿವೇದಿತಾ ಗೌಡ ಇತ್ತೀಚೆಗೆ ಒಂದು ಯೂಟ್ಯೂಬ್ ಚಾನೆಲ್ ತೆರೆದಿದ್ದಾರೆ. ಇಲ್ಲಿ ಹಲವಾರು ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಸಿಕ್ಕಾಪಟ್ಟೆ ಆಕ್ಟಿವ್ ಆಗಿರುವ ನಿವೇದಿತಾ ತಮ್ಮ ವೈಯಕ್ತಿಕ ಬದುಕಿನ ಹಲವು ವಿಚಾರಗಳನ್ನು ಯೂಟ್ಯೂಬ್ ಚಾನೆಲ್ ಮೂಲಕ ಹಂಚಿಕೊಳ್ಳುತ್ತಾ ಇರುತ್ತಾರೆ.
ಈಗ ತಾನು ಮಿಸ್ಟ್ರೆಸ್ ಇಂಡಿಯಾ ಆಗುವ ಬಗ್ಗೆ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ನಿವೇದಿತಾ ಸಿಕ್ಕಾಪಟ್ಟೆ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.
ನಿವೇದಿತಾ ಮಿಸ್ಟ್ರೆಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗಿ ಆಗುವ ಬಗ್ಗೆ ಹೇಳಿಕೊಂಡಿದ್ದರು. ಜೊತೆಗೆ ಈ ಬಗ್ಗೆ ಪುಟ್ಟ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಈಗ ತಮ್ಮ ತಯಾರಿ ಹೇಗಿದೆ ಎನ್ನುವ ಸಂಪೂರ್ಣ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ.