“ರಾಜ್ಯದಲ್ಲಿ 1 ರಿಂದ 9ನೇ ತರಗತಿ ಪರೀಕ್ಷೆ ಇಲ್ಲ”
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯವನ್ನ ದೃಷ್ಠಿಯಲ್ಲಿಟ್ಟುಕೊಂಡು ಸಾರ್ವಜನಿಕ ಶಿಕ್ಷಣ ಇಲಾಖೆ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಿ ಆದೇಶಿಸಿದೆ.
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 15 ಸಾವಿರಕ್ಕೂ ಹೆಚ್ಚು ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ.
ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಗೆ ಸೋಂಕು ತಗುಲುವು ಭೀತಿ ಹೆಚ್ಚಿದೆ.
ಹೀಗಾಗಿ ರಾಜ್ಯದಲ್ಲಿನ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಈ ವರ್ಷ ಪಾಸ್ ಮಾಡಲಾಗುತ್ತಿದೆ ಎಂಬುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.