ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಸಮಯದಲ್ಲಿ ಕರ್ತವ್ಯ ನಿರತ ಸಿಬ್ಬಂದಿಗಳ ಮೇಲೆ ದೈಹಿಕ ಹಲ್ಲೆ ಮಾಡಿ, ಬಸ್ಸುಗಳನ್ನು ಜಖಂಗೊಳಿಸಿದ ಹಾಗೂ ಎಫ್‍ಐಆರ್ ದಾಖಲಾದ ಕೆಲವೇ ಸಿಬ್ಬಂದಿಗಳ ಮೇಲೆ ಮಾತ್ರ ನಿಯಮಾನುಸಾರ ಕ್ರಮಕೈಗೊಳ್ಳಲಾಗಿದೆ. ಇನ್ನಾವುದೆ ಸಿಬ್ಬಂದಿ ಮೇಲೆ ಕ್ರಮಕೈಗೊಂಡಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸ್ಪಷ್ಟನೆ ನೀಡಿದೆ.
ಕೋಲಾರ ವಿಭಾಗದಲ್ಲಿ 200 ನೌಕರರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದು ಸತ್ಯಕ್ಕೆ ದೂರವಾದದ್ದು. ಕೆಎಸ್‍ಆರ್‍ಟಿಸಿ ವ್ಯಾಪ್ತಿಯಲ್ಲಿ ಒಟ್ಟು 13 ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಮುಷ್ಕರ ಸಮಯದ ನಾಲ್ಕು ದಿನಗಳ ವೇತನ ಪಾವತಿ ಕಡಿತದ ಬಗ್ಗೆಯೂ ಇನ್ನೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಮಂಡಳಿ ಸರ್ಕಾರದ ಮಟ್ಟದಲ್ಲಿ ಇದರ ಬಗ್ಗೆ ಚರ್ಚಿಸಿ ಕ್ರಮತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ.
ಬಿಎಂಟಿಸಿ ಸಂಸ್ಥೆಯ ಸ್ಪಷ್ಟನೆ
ಮುಷ್ಕರದ ಸಮಯದಲ್ಲಿ ಕರ್ತವ್ಯ ನಿರತ ಸಿಬ್ಬಂದಿಗಳ ಮೇಲೆ ದೈಹಿಕ ಹಲ್ಲೆ ಮಾಡಿ, ಬಸ್ಸುಗಳನ್ನು ಜಖಂಗೊಳಿಸಿದ ಹಾಗೂ ಎಫ್‍ಐಆರ್ ದಾಖಲಾದ ಕೆಲವೇ ಸಿಬ್ಬಂದಿಗಳ ಮೇಲೆ ಮಾತ್ರ ನಿಯಮಾನುಸಾರ ಕ್ರಮಕೈಗೊಳ್ಳಲಾಗಿದೆ. ಇನ್ನಾವುದೇ ಸಿಬ್ಬಂದಿ ಮೇಲೆ ಕ್ರಮಕೈಗೊಂಡಿರುವುದಿಲ್ಲ. ಸಾರಿಗೆ ಇಲಾಖೆಯಲ್ಲಿ ಮುಷ್ಕರದಲ್ಲಿ ಪಾಲ್ಗೊಂಡ 200 ನೌಕರರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದು ಸತ್ಯಕ್ಕೆ ದೂರವಾದದ್ದು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಮುಷ್ಕರದ ಸಮಯದಲ್ಲಿ ಕಾರ್ಯನಿರತ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿರುವ ಒಟ್ಟು 03 ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.
ಮುಷ್ಕರ ಸಮಯದ ನಾಲ್ಕು ದಿನಗಳ ವೇತನ ಪಾವತಿ ಕಡಿತದ ಬಗ್ಗೆಯೂ ಇನ್ನೂ ಯಾವುದೇ ಕ್ರಮ ತೆಗೆದುಕೊಂಡಿರುವುದಿಲ್ಲ. ಮಂಡಳಿ/ಸರ್ಕಾರದ ಮಟ್ಟದಲ್ಲಿ ಇದರ ಬಗ್ಗೆ ಚರ್ಚಿಸಿ ಕ್ರಮತೆಗೆದುಕೊಳ್ಳಲಾಗುವುದು. ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸ್ಪಷ್ಟನೆ ನೀಡಿದೆ.
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ ಬೀದರ್ ವಿಭಾಗದ 5 ಸಿಬ್ಬಂದಿಗಳು, ಕೊಪ್ಪಳ ವಿಭಾಗದ 02 ಸಿಬ್ಬಂದಿಗಳು, ಬಳ್ಳಾರಿ ವಿಭಾಗದ ಓರ್ವ ಸಿಬ್ಬಂದಿ ಹಾಗೂ ವಿಜಯಪುರ ವಿಭಾಗ ಓರ್ವ ಸಿಬ್ಬಂದಿ ಹೀಗೆ ಒಟ್ಟು 9 ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಮುಷ್ಕರ ಸಮಯದ ನಾಲ್ಕು ದಿನಗಳ ವೇತನ ಪಾವತಿ ಕಡಿತದ ಬಗ್ಗೆಯೂ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತಿಳಿಸಿದೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಮುಷ್ಕರದಲ್ಲಿ ನಿರತರಾದ ಯಾವುದೇ ಸಿಬ್ಬಂದಿಯ ಮೇಲೆ ಈವರೆಗೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel