‘ ಕೊರೊನಾ ಲಸಿಕೆ ಹಾಕಿಸಿಕೊಳ್ಳದೇ ಇದ್ರೆ ಮದ್ಯ ಇಲ್ಲ’…!
ದೇಶದಲ್ಲಿ ಕೊರೊನಾ 2 ನೇ ಅಲೆಗೆ ಜನ ತತ್ತರಿಸಿಹೋಗಿದ್ದಾರೆ. ಸಾವಿನ ಸಂಖ್ಯೆ ಸೋಂಕಿತರ ಸಂಖ್ಯೆ ಹೆಚ್ಚಾಗ್ತಲೇ ಇದ್ದು. ಲಸಿಕೆ ಅಭಿಯಾನವೂ ಜಾರಿಯಲ್ಲಿದೆ.. ಆದ್ರೆ ಅನೇಕರು ಲಸಿಕೆ ಪಡೆಯಲು ಹಿಂದೇಟು ಹಾಕ್ತಿದ್ದಾರೆ.. ಈ ನಡುವೆ ಲಸಿಕೆ ಲಸಿಕೆ ಅಭಿಯಾನವನ್ನು ಉತ್ತೇಜಿಸಲು ಉತ್ತರ ಪ್ರದೇಶದ ಇಟಾವ ಜಿಲ್ಲೆಯ ಅಧಿಕಾರಿಗಳು ಒಂದು ಹೊಸ ಪ್ಲಾನ್ ಮಾಡಿದ್ದಾರೆ.
ಲಸಿಕೆ ಹಾಕಿಸಿಕೊಳ್ಳದವರಿಗೆ ಮದ್ಯ ಮಾರಾಟ ಮಾಡದಂತೆ ಅಧಿಕಾರಿಗಳು ಮದ್ಯದಂಗಡಿಯ ಮಾಲೀಕರಿಗೆ ನಿರ್ದೇಶನ ನೀಡಿದ್ದಾರೆ. ಹೌದು.. 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮದ್ಯ ಮಾರಾಟ ಮಾಡುವುದಕ್ಕೂ ಮೊದಲು ಅವರ ವ್ಯಾಕ್ಸಿನೇಷನ್ ಕಾರ್ಡ್ ಕೇಳುವಂತೆ ಮದ್ಯದಂಗಡಿ ಮಾಲೀಕರಿಗೆ ಇಟವಾ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಹೆಮ್ ಸಿಂಗ್ ಹೇಳಿದ್ದಾರೆ. ಅಲ್ಲದೇ ಮದ್ಯದಂಗಡಿಯ ಮಾಲೀಕರು ನಿಯಮ ಪಾಲಿಸುತ್ತಿದ್ದಾರೆಯೇ ಇಲ್ಲವೇ ಎಂಬುದನ್ನು ನಾನು ಆಗಾಗ ಪರಿಶೀಲಿಸುವುದಾಗಿಯೂ ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.