ಯಾವುದೇ ಮೈತ್ರಿ ಇಲ್ಲ : ವದಂತಿಗಳಿಗೆ ಮಾಯಾವತಿ Mayawati ಫುಲ್ ಸ್ಟಾಪ್
ಲಖನೌ : ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಯಾವುದೇ ಮೈತ್ರಿ ಇಲ್ಲದೇ ಏಕಾಂಗಿಯಾಗಿ ಸ್ಪರ್ಧೆಸಲಿದೆ ಎಂದು ಬಿಎಸ್ ಪಿ ಪಕ್ಷದ ಅಧ್ಯಕ್ಷೆ ಮಾಯಾವತಿ ಸ್ಪಷ್ಟನೆ ನೀಡಿದ್ದಾರೆ.
ಯುಪಿಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಎಸ್ ಪಿ ಎಐಎಂಐಎ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಮಾಯಾವತಿ, ಉತ್ತರಪ್ರದೇಶ ಚುನಾವಣೆಗೆ ಅಸಾದುದ್ದೀನ್ ಒವೈಸಿ ಅವರ ಪಕ್ಷದ ಜೊತೆ ಬಿಎಸ್ ಪಿ ಕೈಜೋಡಿಸಲಿದೆ ಎಂಬ ವರದಿಯನ್ನು ತಳ್ಳಿ ಹಾಕಿದ್ದಾರೆ.
ಈ ಸುದ್ದಿ ಸುಳ್ಳು, ಇದು ಜನರನ್ನು ದಾರಿತಪ್ಪಿಸುವ ವರದಿ. ಮತ್ತು ಆಧಾರರಹಿತವಾಗಿದೆ. ಇದರಲ್ಲಿ ಯಾವುದೂ ಸತ್ಯವಿಲ್ಲ ಎಂದು ಮಾಯಾವತಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಬಿಎಸ್ಪಿ ಪಂಜಾಬ್ ಹೊರತುಪಡಿಸಿ, ಉತ್ತರಪ್ರದೇಶ ಮತ್ತು ಉತ್ತರಾಖಂಡ್ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಯಾವತಿ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.