ರಾಮ್ ಪುರ: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ಜಯಪ್ರದಾ ಅವರಿಗೆ ಉತ್ತರ ಪ್ರದೇಶ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಜಯಪ್ರದಾ ಅವರು ಉತ್ತರ ಪ್ರದೇಶದ ರಾಮ್ ಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಚುನಾವಣಾ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಈ ದೂರಿನ್ವಯ ಇದೀಗ ವಾರೆಂಟ್ ಜಾರಿಯಾಗಿದ್ದು, ಮುಂದಿನ ಏಪ್ರಿಲ್ 20ರಂದು ವಿಚಾರಣೆ ನಡೆಯಲಿದೆ.
ಇನ್ನು ಲೋಕಸಭಾ ಚುನಾವಣೆಯಲ್ಲಿ ಜಯಪ್ರದಾ ಅವರು ಸಮಾಜವಾದಿ ಪಕ್ಷದ ಪ್ರತಿಸ್ಪರ್ಧಿ ಅಜಂ ಖಾನ್ ವಿರುದ್ಧ ಸುಮಾರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ.
ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್ಗಳು
ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...








