ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಿದೆ. ನಿನ್ನೆ ಒಂದೇ 196 ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಸಿಲಿಕಾನ್ ಸಿಟಿಯಲ್ಲಿ ಸೋಂಕಿತರ ಸಂಖ್ಯೆ 1279ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ ಮತ್ತೊಂದು ಶಾಕ್ ಬೆಂಗಳೂರಿಗೆ ಕಾದಿದೆ.
ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ವಿಕ್ಟೋರಿಯ ಆಸ್ಪತ್ರೆ ಮತ್ತು ಬೌರಿಂಗ್ ಆಸ್ಪತ್ರೆ ಯಲ್ಲಿ ವ್ಯವಸ್ಥೆ ಮಾಡಲಾಗಿತ್ತು. ವಿಕ್ಟೋರಿಯ ಆಸ್ಪತ್ರೆಯಲ್ಲಿ 500 ಹಾಸಿಗೆಗಳನ್ನು, ಬೌರಿಂಗ್ ಆಸ್ಪತ್ರೆಯಲ್ಲಿ 240 ಹಾಸಿಗೆಗಳನ್ನು ಸರ್ಕಾರ ಸಿದ್ದ ಮಾಡಿತ್ತು. ಈ ಆಸ್ಪತ್ರೆಯಲ್ಲಿ ಶೀತ ಜ್ವರ ಮತ್ತು ತೀವ್ರ ಉಸಿರಾಟಸ ಸಮಸ್ಯೆ ಇರುವವರನ್ನು ದಾಖಲು ಮಾಡಿಕೊಳ್ಳಲಾಗಿದೆ. ಜೊತೆಗೆ ರಾಜೀವ ಗಾಂಧಿ ಎದೆ ರೋಗ ಆಸ್ಪತ್ರೆಯಲ್ಲಿ ಕೋವಿಡ್ ವಾರ್ಡ್ ನಲ್ಲಿ 104 ಹಾಸಿಗೆಗಳು ಭರ್ತಿ ಆಗಿವೆ. ಐಸಿಯು ಹಾಸಿಗೆಗಳು ಸಹ ಭರ್ತಿಯಾಗಿವೆ. ಇದೀಗ ಪ್ರಕರಣಗಳು ಸಾವಿರರ ಗಡಿ ದಾಟಿದೆ . ಈ ಕಾರಣಕ್ಕೆ ಸಿಲಿಕಾನ್ ಸಿಟಿಯಲ್ಲಿ ಮುಂದೆ ಕೊರೊನಾ ಸೋಂಕಿತರನ್ನು ಎಲ್ಲಿರಿಸಿ ಚಿಕಿತ್ಸೆ ನೀಡಬೇಕು ಎಂಬ ಗೊಂದಲ ಸೃಷ್ಟಿಯಾಗಿದೆ. ಅದ್ದರಿಂದ ಕೊರೊನಾ ಸೋಂಕನ್ನು ನಿಯಂತ್ರಣ ಮಾಡಲು ಬಿಬಿಎಂಪಿ ಹರಸಾಹಸ ಪಡುತ್ತಿದೆ. ಜೊತೆಗೆ ಬೆಂಗಳೂರಿನಲ್ಲಿ ಕೆಲ ಪ್ರದೇಶಗಳನ್ನು ಸೀಲ್ ಡೌನ್ ಮಾಡಲು ಬಿಬಿಎಂಪಿ ಸಿದ್ದತೆ ನಡೆಸಿದೆ.