ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಕೆ ಇಲ್ಲ : ಬಿ.ಶ್ರೀರಾಮುಲು
ಬಳ್ಳಾರಿ : ರಾಜ್ಯದಲ್ಲಿ ಸದ್ಯಕ್ಕೆ ಬಸ್ ಪ್ರಯಾಣದ ದರ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವ ಬಿ ಶ್ರೀರಾಮುಲು ಹೇಳಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಇಂಧನ ಬೆಲೆ ಏರಿಕೆ ಗಮನದಲ್ಲಿದೆ.
ಆದರೆ ಕೊರೊನಾ ಕಾರಣದಿಂದ ಜನರು ಆತಂಕದಲ್ಲಿ ದಿನದೂಡುತ್ತಿದ್ದಾರೆ.
ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಯಾವುದೇ ರೀತಿಯ ಹೊರೆಯಾಗದಂತ ತೀರ್ಮಾನ ನಮ್ಮ ಸರಕಾರದ್ದು ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಸಾರಿಗೆ ನೌಕರರ ಪ್ರತಿಭಟನೆ ಬಗ್ಗೆ ಮಾತನಾಡಿ, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಮತ್ತು ಅವರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.