Monkey pox | ರಾಜ್ಯದಲ್ಲಿ ಮಂಕಿ ಪಾಕ್ಸ್ ಪ್ರಕರಣ ಕಂಡುಬಂದಿಲ್ಲ
ಬೆಂಗಳೂರು : ರಾಜ್ಯದಲ್ಲಿ ಮಂಕಿ ಪಾಕ್ಸ್ ಪ್ರಕರಣ ಕಂಡುಬಂದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರದ ಬಿಜೆಪಿ ಕಚೇರಿಯಲ್ಲಿ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ರಾಜ್ಯದಲ್ಲಿ ಮಂಕಿ ಪಾಕ್ಸ್ ಪ್ರಕರಣ ಕಂಡುಬಂದಿಲ್ಲ.
ಈ ಕುರಿತು ವಿಮಾನ ನಿಲ್ದಾಣ, ಬಂದರುಗಳಲ್ಲಿ ಕಟ್ಟೆಚ್ಚರ ವಹಿಸಿದ್ದು, ಮಾರ್ಗಸೂಚಿ ಪಾಲಿಸಲಾಗುತ್ತಿದೆ.
ಇದಕ್ಕೆ ಬೇಕಾದ ಚಿಕಿತ್ಸೆಗೆ ಸಿದ್ಧತೆ ಕೂಡ ಮಾಡಿಕೊಳ್ಳಲಾಗಿದೆ.
![No case of monkey pox has been found in the karnataka saaksha tv](http://saakshatv.com/wp-content/uploads/2022/05/K-Sudakar-300x198.jpg)
ರಾಜ್ಯದೊಳಗೆ ಈ ಸೋಂಕು ನುಸುಳದಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಜಯದೇವ ಹೃದ್ರೋಗ ಸಂಸ್ಥೆ ಹಾಗೂ ನೆಫ್ರೋ ಯುರಾಲಜಿ ಸಂಸ್ಥೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಸ್ಥರಾಗಿದ್ದಾರೆ.
ಇದಕ್ಕೆ ಸಂಬಂಧಿಸಿದ ಕಡತವನ್ನು ಅವರಿಗೆ ಕಳುಹಿಸಿಕೊಡಲಾಗಿದೆ.
ನಿರ್ದೇಶಕರ ಅವಧಿ ಮುಂದುವರಿಕೆ ಕುರಿತು ಮುಖ್ಯಮಂತ್ರಿಗಳೇ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.