ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ : ಅರುಣ್ ಸಿಂಗ್

1 min read
arun-singh

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ : ಅರುಣ್ ಸಿಂಗ್

ನವದೆಹಲಿ : ಕರ್ನಾಟಕದಲ್ಲಿ ಮುಖ್ಯಮಂತ್ರಿ ಅಥವಾ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಸ್ಪಷ್ಟಪಡಿಸಿದ್ದಾರೆ.

ಎಎನ್ ಐ ಸುದ್ದಿಸಂಸ್ಥೆ ಜೊತೆ ಮಾತನಾಡುವ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅರುಣ್ ಸಿಂಗ್, ಪಕ್ಷದ ಕಾರ್ಯಕರ್ತರಲ್ಲಿ ಕೆಲವೊಮ್ಮೆ ಭಿನ್ನಾಭಿಪ್ರಾಯ, ಅಸಮಾಧಾನ ಬರುವುದು ಸಾಮಾನ್ಯ, ಆದರೆ ಅವರೆಲ್ಲರೂ ಒಗ್ಗಟ್ಟಾಗಿದ್ದಾರೆ, ಪಕ್ಷದ ವಿಷಯ ಬಂದಾಗ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಾರೆ. ನಾನು ಕರ್ನಾಟಕಕ್ಕೆ ಹೋಗಿ ಪಕ್ಷದ ನಾಯಕರಲ್ಲಿ, ಕಾರ್ಯಕರ್ತರಲ್ಲಿ ಮಾತನಾಡುತ್ತೇನೆ ಎಂದರು.

Arun Singh

ಇನ್ನು ಕರ್ನಾಟಕದಲ್ಲಿ ಕೋವಿಡ್ 19 ಸಂಕಷ್ಟದ ಈ ಸಮಯದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರುಗಳು, ಪಕ್ಷದ ನಾಯಕರು, ಕಾರ್ಯಕರ್ತರು ಚೆನ್ನಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಮಾತ್ರ ರಹಸ್ಯವಾಗಿ ಪಿತೂರಿ ನಡೆಸಿ ಈ ರೀತಿಯ ಊಹಾಪೆÇೀಹಗಳನ್ನು ಹಬ್ಬಿಸುತ್ತಿದೆ ಎಂದು ಆರೋಪಿಸಿದರು.

ಅಲ್ಲದೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಅಥವಾ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd