ರಾಜ್ಯದಲ್ಲಿ ಸಂಪೂರ್ಣ ಗಣಿಗಾರಿಕೆ ನಿಷೇಧಿಸಲು ಸಾಧ್ಯವಿಲ್ಲ : ಬಿ.ಎಸ್.ಯಡಿಯೂರಪ್ಪ
ಬೆಂಗಳೂರು : ರಾಜ್ಯದಲ್ಲಿ ಸಂಪೂರ್ಣವಾಗಿ ಗಣಿಗಾರಿಕೆ ನಿಷೇಧಿಸಲು ಸಾಧ್ಯವಿಲ್ಲ. ಒಂದ ಬೇಳೆ ಅಂತಹ ಕ್ರಮ ತೆಗೆದುಕೊಂಡೇ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡುತ್ತಾ, ಶಿವಮೊಗ್ಗ ಸ್ಫೋಟ ಪ್ರಕರಣವನ್ನು ಉಲ್ಲೇಖಿಸಿದ ಅವರು, ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಕಾನೂನು ಬದ್ಧವಾಗಿದ್ದರೆ ಯಾರೂ ಕೂಡ ತಲೆ ಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಹೇಳಿದರು.
ಇದೇ ವೇಳೆ ಗಣಿಗಾರಿಕೆ ಅಥವಾ ಕಲ್ಲು ಕ್ವಾರಿ ಚಟುವಟಿಕೆ ನಿಷೇಧಿಸಲು ಸಾಧ್ಯವಿಲ್ಲ ಎಂದ ಅವರು, ಒಂದು ವೇಳೆ ನಿಷೇಧದ ಕ್ರಮ ಕೈಗೊಂಡರೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ ಎಂದರು.
ಇನ್ಮುಂದೆ ಕಾನೂನುಬದ್ಧವಾಗಿ ಗಣಿಗಾರಿಕೆ ನಡೆಸಲು ಅವಕಾಶ ನೀಡುತ್ತೇವೆ. ಸಂಬಂಧಪಟ್ಟ ಅಧಿಕಾರಿಗಳಿಂದ ಲೈಸನ್ಸ್ ಪಡೆಯಬೇಕು.
ಒಂದು ವೇಳೆ ಲೈಸನ್ಸ್ ಪಡೆಯದೆ ಗಣಿಗಾರಿಕೆ ನಡೆಸುತ್ತಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಖಡಕ್ ವಾರ್ನಿಂಗ್ ಕೊಟ್ಟರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









