ಬೆಂಗಳೂರು : ಬಿ.ಎಸ್.ಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಆದ್ದರಿಂದ ನಾವು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ತೀರ್ಮಾನಿಸಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುಟುಂಬ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ.
ರಾಜ್ಯದಲ್ಲಿ ವೈದ್ಯಕೀಯ ಉಪಕರಣ, ಲ್ಯಾಪ್‍ಟಾಪ್, ವಿದ್ಯುತ್ ಪರಿವರ್ತಕ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ.
ಅಭಿವೃದ್ಧಿ ಕುಂಠಿತಗೊಂಡು ಆರ್ಥಿಕ ಅಧೋಗತಿಗೆ ಹೋಗುತ್ತಿದೆ. ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಕಾರ್ಮಿಕ ವಿರೋಧಿ ಕಾನೂನು ತಂದಿದ್ದಾರೆ.
ಒಂದು ವರ್ಷ ನಾಲ್ಕು ತಿಂಗಳಲ್ಲಿ ರಾಜ್ಯ ಅಧೋಗತಿಗೆ ಹೋಗಿದೆ. ಯಡಿಯೂರಪ್ಪ ಸರ್ಕಾರ ಒಂದು ಲಕ್ಷ, ಒಂದು ಸಾವಿರ ಕೋಟಿ ಸಾಲ ಮಾಡಿದೆ.
ಯಡಿಯೂರಪ್ಪ ಮಂತ್ರಿ ಮಂಡಲ ವಿಶ್ವಾಸ ಕಳೆದುಕೊಂಡಿದೆ. ಈಗಾಗಲೇ ನೋಟಿಸ್ ಕೊಟ್ಟಿದ್ದು, ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತೇವೆ ಎಂದು ತಿಳಿಸಿದರು.








