ಕೊಪ್ಪಳದಲ್ಲಿ ಲಾಕ್ ಡೌನ್ ಗಿಲ್ಲ ಕಿಮ್ಮತ್ತು Koppal
ಕೊಪ್ಪಳ : ಕೊರೊನಾ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಲಾಕ್ ಡೌನ್ ಹೇರಲಾಗಿದೆ.
ಆದ್ರೆ ಕೊಪ್ಪಳದಲ್ಲಿ ಲಾಕ್ ಡೌನ್ ಗೆ ಯಾರು ಕಿಮ್ಮತ್ತೇ ಕೊಡುತ್ತಿಲ್ಲ.
ನಾಳೆ ನಾಡಿದ್ದು ರಂಜಾನ್, ಬಸವ ಜಯಂತಿ ಇರುವ ಕಾರಣ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ.
ಏಕಾಏಕಿ ಜನರು ರಸ್ತೆಗಿಳಿದ ಪರಿಣಾಮ ಕೊಪ್ಪಳದ ಜವಾಹರ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಮುಖ್ಯವಾಗಿ ಅಗತ್ಯ ವಸ್ತುಗಳ ವ್ಯಾಪ್ತಿಗೆ ಬರದೇ ಇರುವ ಅಂಗಡಿಗಳು ಕೂಡ ಓಪನ್ ಆಗಿದ್ದು, ಭರ್ಜರಿ ವ್ಯಾಪಾರ ನಡೆದಿದೆ.
ಕೆಲ ಬಟ್ಟೆ ಅಂಗಡಿಗಳು ಮುಂದಿನ ಬಾಗಿಲು ಕ್ಲೋಸ್ ಮಾಡಿಕೊಂಡು ಹಿಂಬಾಗಿಲಿನಿಂದ ಜನರನ್ನು ಒಳ ಕರೆದು ವ್ಯಾಪಾರ ನಡೆಸುತ್ತಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಗೆ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.










