ನಾನು ಮನೆಯವನೇ.. ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ಇಲ್ಲ : ಸಿದ್ದರಾಮಯ್ಯ
ಮೈಸೂರು : ನಾನು ಮನೆಯವನೇ. ಮುಖ್ಯಮಂತ್ರಿ ಯಾರಾಗಬೇಕೆಂಬುದು ಚುನಾವಣೆಯ ಫಲಿತಾಂಶ ಬಂದ ನಂತರ ಶಾಸಕರು, ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದಲ್ಲಿ ‘ಮುಂದಿನ ಸಿಎಂ ಯಾರು’ ಎಂಬ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ.
ನನ್ನ ಮತ್ತು ಡಿಕೆ ಶಿವಕುಮಾರ್ ನಡುವೆ ಯಾವುದೇ ಸಮನ್ವಯ ಸಮಿತಿ ರಚನೆ ಆಗುತ್ತಿಲ್ಲ.
ನಾನು ಮನೆಯವನೇ. ಮುಖ್ಯಮಂತ್ರಿ ಯಾರಾಗಬೇಕೆಂಬುದು ಚುನಾವಣೆಯ ಫಲಿತಾಂಶ ಬಂದ ನಂತರ ಶಾಸಕರು, ಹೈಕಮಾಂಡ್ ತೀರ್ಮಾನ ಮಾಡುತ್ತದೆ.
ಚುನಾವಣೆಗೆ ಇನ್ನೂ ಎರಡೂವರೆ ವರ್ಷವಿದೆ. ಈಗಲೇ ಸಿಎಂ ಅಭ್ಯರ್ಥಿ ಬಗ್ಗೆ ಮಾತುಗಳು ಇಲ್ಲ ಎಂದು ಸ್ಪಷ್ಟಡಿಸಿದರು.
ಇದೇ ವೇಳೆ ಮೂಲ – ವಲಸೆ ಕಾಂಗ್ರೆಸ್ ಎಂಬ ಬಗ್ಗೆ ಮಾತನಾಡಿ, ಕಾಂಗ್ರೆಸ್ ನಲ್ಲಿ ಮೂಲ ವಲಸಿಗ ಎಂಬ ಪ್ರಶ್ನೆಯು ಇಲ್ಲ. ಸೊಸೆ ಮನೆಗೆ ಬರುವವರೆಗೂ ಹೊರಗಿನವಳು.
ಬಂದ ಮೇಲೆ ಸೊಸೆ ಮನೆಯವಳೇ ಆಗುತ್ತಾಳೆ. ಅದೇ ರೀತಿ ನಾನು ಹೊರಗಿನಿಂದ ಬಂದವನು. ಬಂದ ಮೇಲೆ ನಾನು ಐದು ವರ್ಷ ಮುಖ್ಯಮಂತ್ರಿಯಾಗಿದ್ದೇನೆ ಎಂದು ಹೇಳಿದರು.