ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲೂಟ ಮಾಡುತ್ತಿರುವ ದರ್ಶನ್ ಗೆ ಮನೆಯೂಟ ನೀಡಲು ಕೋರ್ಟ್ ಅಸಮ್ಮತಿ ನೀಡಿದೆ. ಹೀಗಾಗಿ ದರ್ಶನ್ (Darshan) ಜೈಲೂಟವನ್ನೇ ಮಾಡಬೇಕಾಗಿದೆ.
ಮನೆಯಿಂದ ಊಟ (Home Cooked Food) ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜುಲೈ 25ಕ್ಕೆ ಆದೇಶ ಕಾಯ್ದಿರಿಸಿದೆ. ದರ್ಶನ್ ಪರ ಮತ್ತು ಪೊಲೀಸರ ಪರ ವಕೀಲರ ವಾದ ಆಲಿಸಿದ ನ್ಯಾಯಾಧೀಶರು ಜುಲೈ 25 ರಂದು ಆದೇಶ ಪ್ರಕಟಿಸುವುದಾಗಿ ಹೇಳಿದರು.
ಆರೋಪಿ ಜೈಲಿನಲ್ಲಿ ಇರುವಾಗ ಮನೆಯ ಊಟ ಪಡೆಯಬಹುದು. ಇದು ವಿಚಾರಣಾಧೀನ ಕೈದಿಯ ಹಕ್ಕು. ಜೈಲಿನ ನಿಯಮಗಳಲ್ಲಿ ಇದರ ಉಲ್ಲೇಖವಿದೆ. ಕೆಲವೊಂದು ನಿಬಂಧನೆಗಳನ್ನು ಹೇಳಿ ಅವಕಾಶ ಕೊಡಿಸಬಹುದು. ತಮ್ಮದೇ ವೆಚ್ಚದಲ್ಲಿ ಇದನ್ನು ಪಡೆಯಲು ಅವಕಾಶ ನೀಡಲಾಗಿದೆ. ಸೆಕ್ಷನ್ 30 ರ ಪ್ರಕಾರ ಜೈಲಿನಲ್ಲಿ ಇರುವ ಆರೋಪಿ ಮನೆಯ ಊಟ ಪಡೆಯಬಹುದು. ಅಲ್ಲದೇ ಮನೆಯಿಂದ ಹಾಸಿಗೆ ವ್ಯವಸ್ಥೆ ಮತ್ತು ಪುಸ್ತಕಗಳನ್ನು ಹೊಂದುವ ಅವಕಾಶ ಇದೆ. ಹೀಗಾಗಿ ದರ್ಶನ್ ಆರೋಗ್ಯದ ದೃಷ್ಟಿಯಿಂದ ಮನೆಯೂಟಕ್ಕೆ ಬೇಡಿಕೆ ಇಟ್ಟಿದ್ದಾರೆ.
ಆರೋಪಿಗೆ ಶಿಕ್ಷೆ ವಿಧಿಸುವವರೆಗೂ ಆತ ಕೆಲವು ಸೌಲಭ್ಯ ಪಡೆಯಬಹುದು. ದರ್ಶನ್, ಆಹಾರ ಅಜೀರ್ಣವಾಗುತ್ತಿದೆ. ಪುಡ್ ಪಾಯಿಸನ್ ಆಗಿದೆ, ಭೇದಿ ಆಗುತ್ತಿದೆ ಎಂದು ಹೇಳಿ ಮನೆಯೂಟಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ, ಒಂದು ಬಾರಿಯೂ ಭೇದಿ ಆಗಿದೆ ಎಂದು ಆಸ್ಪತ್ರೆಯಲ್ಲಿ ದರ್ಶನ್ ಚಿಕಿತ್ಸೆ ಪಡೆದಿಲ್ಲ. ಅವರು ಕೇಲವಲ ಮುರಿದಿರುವ ಕೈ ಬಗ್ಗೆ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ಅವರಿಗೆ ಈಗ ವೈರಲ್ ಫೀವರ್ ಇದ್ದು ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗದೆ.
ಜೈಲಿನ ನಿಯಮಗಳ ಪ್ರಕಾರ ಮನೆಯ ಊಟ ಎನ್ನುವುದರ ಬಗ್ಗೆ ಉಲ್ಲೇಖ ಇಲ್ಲ. ಅನಾರೋಗ್ಯದ ಸಮಯದಲ್ಲಿ ಮಾತ್ರ ವಿಶೇಷ ಊಟ ನೀಡಬಹುದು ಹೊರತು ಮನೆಯ ಊಟವನ್ನೇ ನೀಡಬೇಕು ಎಂಬ ಉಲ್ಲೇಖವಿಲ್ಲ. ಅನಾರೋಗ್ಯದ ವೇಳೆ ವಿಶೇಷ ಕಾಳಜಿ ಆಹಾರ ನೀಡಬೇಕು. ವಾರದಲ್ಲಿ ಒಮ್ಮೆ ಮಾತ್ರ ಮಾಂಸಾಹಾರದ ಊಟ ಕೊಡಬಹುದು. ಅದನ್ನು ಬಿಟ್ಟು ಪ್ರತಿ ದಿನ ಬಿರಿಯಾನಿ ತಿನ್ನಬೇಕು ಎಂದರೆ ನೀಡಲು ಸಾಧ್ಯವಿಲ್ಲ. ಬಿಸಿ ನೀರನ್ನು ಕೂಡ ಅನಾರೋಗ್ಯ ಇದ್ದಾಗ ಮಾತ್ರ ನೀಡಬಹುದು. ಪ್ರತಿ ದಿನ ನೀಡಲು ಸಾಧ್ಯವಿಲ್ಲ. ಆದರೆ, ಈಗ ಕೋರ್ಟ್ ಮನೆಯೂಟದ ವಿಷಯದಲ್ಲಿ ಯಾವ ತೀರ್ಪು ಪ್ರಕಟಿಸಲಿದೆ ಕಾಯ್ದು ನೋಡಬೇಕಿದೆ.








