ಹೈದರಾಬಾದ್ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಲಾಕ್ ಡೌನ್ ಹೊರತಾಗಿಯೂ ಜನರು ಅಲ್ಲಲ್ಲಿ ಓಡಾಡುತ್ತಲೇ ಇದ್ದಾರೆ. ಇದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಗಳು ಇನ್ನೂ ಹೆಚ್ಚಾಗುತ್ತಿವೆ. ಇದರ ಮಧ್ಯೆ ಲಾಕ್ ಡೌನ್ ಯಿಂದಾಗಿ ದೇಶದ ಅರ್ಥವ್ಯವಸ್ಥೆಯ ಮೇಲೆ ವ್ಯತಿರಿಕ್ತಪರಿಣಾಮ ಬೀರುತ್ತಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಇದೇ ಏಪ್ರಿಲ್ 8 ರಂದು ಸರ್ವಪಕ್ಷಗಳ ಸಂಸದರ ಸಭೆ ಕರೆದಿದ್ದಾರೆ. ಆದ್ರೆ ಈ ಸಭೆಗೆ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ಪ್ರವೇಶವಿಲ್ಲದಂತಾಗಿದೆ.
ಸರ್ವಪಕ್ಷಗಳ ಸಭೆಯಲ್ಲಿ “ಓವೈಸಿ”ಗೆ ನೋ ಎಂಟ್ರಿ!
ಹೌದು..! ಸದ್ಯ ಪರಿಸ್ಥಿತಿಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರಸಚಿವ ಪ್ರಲ್ಹಾದ್ ಜೋಶಿ, ಎಲ್ಲಾ ಸಂಸದರಿಗೆ ಮಾಹಿತಿ ನೀಡಿದ್ದಾರೆ. ಆದರೆ ಏಪ್ರಿಲ್ 8 ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಸಭೆಯಲ್ಲಿ ಒಂದು ಟ್ವಿಸ್ಟ್ ನೀಡಲಾಗಿದೆ. ವಿಡಿಯೋ ಕಾನ್ಫರೆನ್ಸ್ ನಲ್ಲಿ ನಡೆಯುವ ಮೀಟಿಂಗ್ ನಲ್ಲಿ ಪಾಲ್ಗೊಳ್ಳಲು ಆ ಪಕ್ಷದ ಐದು ಸಂಸದರು, ಸಂಸತ್ ನಲ್ಲಿರಬೇಕು. ಅಂದರೆ, ಕನಿಷ್ಠ ಐದು ಸಂಸದರನ್ನು ಹೊಂದಿರುವ ಪಕ್ಷದ ಸಂಸದರು ಮಾತ್ರ ಸರ್ವ ಪಕ್ಷ ಸಭೆಯಲ್ಲಿ ಪಾಲ್ಗೊಳ್ಳಬಹುದು. ಈ ನಿಯಮದಿಂದಾಗಿ, ಎಐಎಂಐಎಮ್ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಈ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ.








