ಭ್ರೂಣ ಪತ್ತೆಗೆ ರಾಜ್ಯದಲ್ಲಿ ಅವಕಾಶವಿಲ್ಲ : ಡಾ.ಕೆ.ಸುಧಾಕರ್ Saaksha Tv
ಬೆಂಗಳೂರು: ಭ್ರೂಣ ಪತ್ತೆಗೆ ರಾಜ್ಯದಲ್ಲಿ ಅವಕಾಶವಿಲ್ಲ. ಭ್ರೂಣ ಪತ್ತೆ ಮಾಡುವ ತಜ್ಞರಿಗೆ ಮತ್ತು ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭ್ರೂಣ ಪತ್ತೆ ಮಾಡುವ ಆಸ್ಪತ್ರೆಗಳ ಪರವನಿಗೆಯನ್ನು ರದ್ದು ಮಾಡಲಾಗುವುದು. ಮಹಿಳೆಯರಿಗೆ ಸಾಮಾನತೆ ನೀಡುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯವಾಗಿದೆ. ಭ್ರೂಣ ಹತ್ಯೆ ವಿರುದ್ಧ ಜಾಗೃತಿ ಹಾಗೂ ಲಿಂಗ ಸಮಾನತೆ ತರಲು ಪ್ರಯತ್ನಿಸಬೇಕಿದೆ ಎಂದು ಹೇಳಿದರು.
2001 ರಲ್ಲಿ 946 ಇದ್ದ ಲಿಂಗಾನುಪಾತ, 2018ರಲ್ಲಿ 957 ಕ್ಕೆ ಏರಿದೆ. ಹೆಣ್ಣುಮಕ್ಕಳ ಸಂಖ್ಯೆ ಏರಿಕೆಯಾಗಿರುವುದು ಆಶಾದಾಯಕವಾಗಿದೆ. ಹೆಣ್ಣುಮಕ್ಕಳ ಸಬಲೀಕರಣಕ್ಕೆ ನಮ್ಮ ಸರಕಾರ ಬದ್ಧವಾಗಿರುತ್ತದೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್ ನಲ್ಲಿ ಶೇ 100 ಪ್ರತಿಶತದಷ್ಟು ಮತ್ತು ಎರಡನೇ ಡೋಸ್ ನಲ್ಲಿ ಶೇ 85.3 ರಷ್ಟು ಪ್ರಗತಿಯಾಗಿದೆ. 15-17 ವರ್ಷದ ಮಕ್ಕಳಲ್ಲಿ ಶೇ 67.5 ಪ್ರತಿಶತದಷ್ಟು ಮೊದಲ ಡೋಸ್ ನೀಡಲಾಗಿದೆ. 4,85,818 ಬೂಸ್ಟರ್ ಡೋಸ್ ನೀಡಲಾಗಿದೆ. ಕೊರೊನಾ ಲಸಿಕೆಕರಣದಲ್ಲಿ ರಾಜ್ಯ ಮುಂಚೂಣಿಯಲ್ಲಿದೆ ಎಂದರು.