ಬೆಂಗಳೂರು : ರಾಜ್ಯ ಸರ್ಕಾರ ಕೇಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಹಣ ಕೊಡುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ಯಾಣದ ವ್ಯಾಪ್ತಿಯಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು ನಿರ್ಮಿಸಲು ಹೊರಟಿರುವ ಸರ್ಕಾರದ ನಿರ್ಧಾರದ ಬಗ್ಗೆ ಮತ್ತು ನಿರ್ಮಾಣಕ್ಕೆ ಸರ್ಕಾರ ಹಣ ನೀಡುತ್ತಿರುವ ಬಗ್ಗೆ ಸರ್ಕಾರ ಪತ್ರ ಬರೆದ ಡಿ.ಕೆ ಶಿವಕುಮಾರ್ , ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ಯಾಣದ ವ್ಯಾಪ್ತಿಯಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು ನಿರ್ಮಿಸಲು ಹೊರಟಿರುವ ಬಗ್ಗೆ. ಕರ್ನಾಟಕ ಸರ್ಕಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು ನಿರ್ಮಿಸಲು ಹೊರಟಿರುವುದು ಸಂತಸದ ವಿಚಾರ.
ಇದಕ್ಕೆ ನಮ್ಮ ಬೆಂಬಲವಿದೆ. ಆದರೆ ಇದಕ್ಕೆ ಸರ್ಕಾರ ಹಣ ನೀಡುವ ಅವಶ್ಯಕತೆ ಇಲ್ಲವೆಂದು ನಮಗೆ ಅನ್ನಿಸುತ್ತಿದೆ. ವಿಮಾನ ನಿಲ್ಯಾಣದ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಬಹಳಷ್ಟು ಸಹಕಾರ ನೀಡಿದ ಮತ್ತು ಸಾಕಷ್ಟು ಅನುಕೂಲಗಳನ್ನು ಮಾಡಿಕೊಟ್ಟಿದೆ, ಆದ್ದರಿಂದ ಈ ಬೃಹತ್ ಪ್ರತಿಮೆಗೆ ಅವಶ್ಯಕವಿರುವ ಹಣವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ಯಾಣ ಸಂಸ್ಥೆಯೇ ಭರಿಸಬೇಕೆಂದು ನಾವು ಆಗ್ರಹಿಸುತ್ತಿದ್ದೇವೆ. ಆ ಮೂಲಕ ಸರ್ಕಾರ ಮತ್ತು ರಾಜ್ಯ ಮಾಡಿದ ಸಹಾಯಕ್ಕೆ ವಿಮಾನ ಲ್ಯಾಣ ಸಂಸ್ಥೆ ತನ್ನ ಕಿರು ಕಾಣಿಕೆ ನೀಡಿದಂತಾಗುತ್ತದೆ. ಹಾಗೆ ಮಾಡಿದಾಗ ಈಗಾಗಲೇ ಪ್ರತಿಮೆಗಾಗಿ ಬಜೆಟ್ ನಲ್ಲಿ ಮೀಸಲಿಟ್ಟಿರುವ ಹಣದಲ್ಲಿ ಸುಮನಹಳ್ಳಿಯಲ್ಲಿ ನೀಡಲಾಗಿರುವ ಐದು ಎಕರೆ ಜಮೀನಿನಲ್ಲಿ ಒಂದು ಕೆಂಪೇಗೌಡ ಸ್ಮಾರಕ ಕೇಂದ್ರ, ವಸ್ತು ಸಂಗ್ರಹಾಲಯ, ಅಧ್ಯಯನ ಸಂಸ್ಥೆ ಮತ್ತು ಸಾಂಸ್ಕೃತಿಕ ಕೇಂದ್ರವನ್ನು ಮಾಡಬೇಕಾಗಿ ವಿನಂತಿಸುತ್ತೇವೆ. ತಾವು ನಮ್ಮ ಬೇಡಿಕೆಯನ್ನು ಕೂಡಲೇ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ವಿನಂತಿ ಎಂದು ಡಿಕೆಶಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.