ನಾಳೆ ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ಆದರೆ, ರಾಜ್ಯದಲ್ಲಿ ರಜೆ ಘೋಷಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದಯ ಬಿಜೆಪಿ ಆಗ್ರಹಿಸಿದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ನಾಳೆ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯಲಿವೆ. ಆದರೆ, ಸರ್ಕಾರಿ ರಜೆ ಇಲ್ಲ.
ಮುಜರಾಯಿ ದೇಗುಲಗಳಲ್ಲಿ ದಾಸೋಹ, ಪಾನಕ-ಫಲಹಾರ ವ್ಯವಸ್ಥೆ ಮಾಡಿರುವ ಕುರಿತು ನನಗೆ ಮಾಹಿತಿ ಇಲ್ಲ. ಮಹದೇವಪುರದಲ್ಲಿ ರಾಮನ ದೇವಸ್ಥಾನ ಉದ್ಘಾಟನೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.