ಹಳ್ಳಿಗೆ ಕೊರೊನಾ ಕೊಳ್ಳಿ : ಹಳ್ಳಿಗಳಲ್ಲಿ ಹೋಂ ಐಸೊಲೇಷನ್ ಇಲ್ಲ!
ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ನಡುವೆಯೂ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಸದ್ಯ ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ.
ಹಳ್ಳಿಗಳಲ್ಲಿ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ನಿಧಾನಕ್ಕೆ ಹೆಚ್ಚಾಗುತ್ತಿದೆ ಎನ್ನುವ ಆತಂಕಕಾರಿ ವಿಷಯ ಬಹಿರಂಗವಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚಾಗುತ್ತಿರುವುದನ್ನ ಗಂಭೀರವಾಗಿ ತೆಗೆದುಕೊಂಡಿರುವ ರಾಜ್ಯ ಸರ್ಕಾರ ಇದೀಗ ಬಿಗಿ ಕ್ರಮಗಳಿಗೆ ಮುಂದಾಗಿದೆ.
ಇಷ್ಟು ದಿನ ರೋಗ ಲಕ್ಷಣವಿಲ್ಲದ ಸೋಂಕಿತರನ್ನು ಹೋಂ ಐಸೊಲೇಷನ್ ನಲ್ಲಿ ಇರಲು ಅನುಮತಿ ನೀಡಲಾಗುತ್ತಿತ್ತು. ಆದರೆ ಹೋಂ ಐಸೊಲೇಷನ್ ನಿಯಮ ಸರಿಯಾಗಿ ಪಾಲನೆ ಮಾಡದ ಕಾರಣದಿಂದಾಗಿಯೇ ಹಳ್ಳಿಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ.
ಇದನ್ನು ತಡೆಯಲು ಸರ್ಕಾರ ಇದೀಗ ಹಳ್ಳಿಗಳಲ್ಲಿ ಹೋಂ ಐಸೊಲೇಷನ್ ಪದ್ಧತಿ ಕೈಬಿಟ್ಟು ಕೋವಿಡ್ ಕೇರ್ ಸೆಂಟರ್ ಗಳಿಗೆ ಸೋಂಕಿತರನ್ನು ದಾಖಲಿಸಬೇಕು ಎನ್ನುವ ನಿರ್ಧಾರ ಕೈಗೊಂಡಿದೆ.
ಅಲ್ಲದೇ ನಗರ ಪ್ರದೇಶದಿಂದ ಗ್ರಾಮಕ್ಕೆ ಬರುವ ಜನರಿಗೆ ಕೋವಿಡ್ ಪರೀಕ್ಷೆ ನಡೆಸಬೇಕು. ಯಾರಿಗೆ ಸೋಂಕು ದೃಢಪಡಲಿದೆಯೋ ಅವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಬೇಕು,
ಹೋಂ ಐಸೋಲೇಷನ್ ಬದಲು ಕೋವಿಡ್ ಕೇರ್ ಸೆಂಟರ್ ಗೆ ಹೋಗುವ ಅಗತ್ಯತೆ ಕುರಿತು ಮನವರಿಕೆ ಮಾಡಿಕೊಡಬೇಕು ಎಂದಿದೆ.