ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಬೆಂಗಳೂರು

ಕೋಗಿಲು ಲೇಔಟ್ ಕರಾಮತ್ತು : ದುಡ್ಡು ಕೊಡ್ತೀವಿ ಅಂದ್ರೂ ಮನೆ ಇಲ್ಲ; ಒತ್ತುವರಿದಾರರಿಗೆ ಎರಡೇ ವಾರದಲ್ಲಿ ಫ್ಲ್ಯಾಟ್ ಭಾಗ್ಯ

No house even if you give money; squatters get a flat in just two weeks

Shwetha by Shwetha
January 2, 2026
in ಬೆಂಗಳೂರು, Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯದಲ್ಲಿ ಕಾನೂನು ಪಾಲಿಸುವ ಪ್ರಾಮಾಣಿಕ ಮಧ್ಯಮ ವರ್ಗದ ಜನರಿಗೆ ಬೆಲೆಯೇ ಇಲ್ಲದಂತಾಗಿದೆಯೇ? ಹೀಗೊಂದು ಗಂಭೀರ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ಸ್ವಂತ ಸೂರು ಹೊಂದುವ ಕನಸು ಹೊತ್ತು, ಸರ್ಕಾರದ ನಿಯಮದಂತೆ ಅರ್ಜಿ ಸಲ್ಲಿಸಿ, ವರ್ಷಗಟ್ಟಲೆ ಕಚೇರಿಗಳಿಗೆ ಅಲೆದಾಡಿದರೂ ಮನೆ ಸಿಗುತ್ತಿಲ್ಲ. ಆದರೆ, ಸರ್ಕಾರಿ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿದವರಿಗೆ ಮಾತ್ರ ಕೇವಲ ಎರಡೇ ವಾರದಲ್ಲಿ ಫ್ಲ್ಯಾಟ್ ಭಾಗ್ಯ ಕಲ್ಪಿಸುವ ಮೂಲಕ ಸರ್ಕಾರ ವಿಚಿತ್ರ ಹಾಗೂ ಆಘಾತಕಾರಿ ಆದ್ಯತೆಯನ್ನು ಪ್ರದರ್ಶಿಸಿದೆ.

ಕೋಗಿಲು ಲೇಔಟ್‌ನಲ್ಲಿ ನಡೆದಿರುವ ಈ ಘಟನೆ, ರಾಜ್ಯದ ವಸತಿ ಯೋಜನೆಗಳ ಅಸಲಿ ಮುಖವಾಡವನ್ನು ಕಳಚಿದ್ದು, ಪ್ರಾಮಾಣಿಕ ಅರ್ಜಿದಾರರ ಆಕ್ರೋಶಕ್ಕೆ ಕಾರಣವಾಗಿದೆ.

Related posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

March 10, 2026
ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

March 10, 2026

ಅಕ್ರಮ ಒತ್ತುವರಿದಾರರಿಗೆ ರೆಡ್ ಕಾರ್ಪೆಟ್ ಸ್ವಾಗತ

ಸಾಮಾನ್ಯವಾಗಿ ಬಡವರು ಅಥವಾ ಮಧ್ಯಮ ವರ್ಗದವರು ಸರ್ಕಾರಿ ವಸತಿ ಯೋಜನೆಗೆ ಆಯ್ಕೆಯಾಗಲು ಹತ್ತಾರು ದಾಖಲೆಗಳನ್ನು ನೀಡಿ, ವರ್ಷಗಟ್ಟಲೆ ಕಾಯಬೇಕು. ಆದರೆ, ಕೋಗಿಲು ಲೇಔಟ್‌ನಲ್ಲಿ ಸರ್ಕಾರಿ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದವರಿಗೆ ಸರ್ಕಾರವೇ ಮುಂದೆ ನಿಂತು ರತ್ನಗಂಬಳಿ ಸ್ವಾಗತ ನೀಡಿದೆ. ಒತ್ತುವರಿದಾರರನ್ನು ಅಲ್ಲಿಂದ ತೆರವುಗೊಳಿಸುವ ನೆಪದಲ್ಲಿ, ಅವರಿಗೆ ಕೇವಲ ಎರಡೇ ವಾರದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ.

ಅಚ್ಚರಿಯ ಸಂಗತಿಯೆಂದರೆ, ಇವರಿಗೆ ಕೇವಲ ಮನೆ ನೀಡಿದ್ದಲ್ಲದೆ, ಸರ್ಕಾರವೇ ಬ್ಯಾಂಕ್ ಸಾಲ ಮತ್ತು ಸಬ್ಸಿಡಿ ಸೌಲಭ್ಯವನ್ನೂ ಒದಗಿಸಿಕೊಟ್ಟಿದೆ. ಮಾರುಕಟ್ಟೆಯಲ್ಲಿ ಸುಮಾರು 11.20 ಲಕ್ಷ ರೂಪಾಯಿ ಬೆಲೆಬಾಳುವ ಫ್ಲ್ಯಾಟ್‌ಗಳನ್ನು, ಈ ಒತ್ತುವರಿದಾರರಿಗೆ ಕೇವಲ 1.75 ಲಕ್ಷದಿಂದ 2.75 ಲಕ್ಷ ರೂಪಾಯಿಗಳ ಅತ್ಯಂತ ಕಡಿಮೆ ದರದಲ್ಲಿ ನೀಡಲಾಗಿದೆ. ಕಾನೂನು ಮುರಿದವರಿಗೆ ಸರ್ಕಾರವೇ ರಿಯಾಯಿತಿ ದರದಲ್ಲಿ ಬಹುಮಾನ ನೀಡಿದಂತಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ.

ಹಣವಿದ್ದರೂ ಮನೆ ಇಲ್ಲ: ಅರ್ಹರ ಗೋಳು

ಒಂದೆಡೆ ಒತ್ತುವರಿದಾರರಿಗೆ ಇಷ್ಟು ತ್ವರಿತಗತಿಯಲ್ಲಿ ಸೂರು ಸಿಗುತ್ತಿದ್ದರೆ, ಮತ್ತೊಂದೆಡೆ ರಾಜೀವ್ ಗಾಂಧಿ ವಸತಿ ನಿಗಮದ ನಿಯಮಗಳನ್ನು ನಂಬಿ ಅರ್ಜಿ ಹಾಕಿದವರು ಕಣ್ಣೀರು ಹಾಕುತ್ತಿದ್ದಾರೆ. ಸಾವಿರಾರು ಅರ್ಜಿದಾರರು, ನಿಗಮ ನಿಗದಿಪಡಿಸಿರುವ ಪೂರ್ಣ ಮೊತ್ತವಾದ 11.20 ಲಕ್ಷ ರೂಪಾಯಿಗಳನ್ನು ಪಾವತಿಸಲು ಸಿದ್ಧರಿದ್ದೇವೆ. ನಮಗೆ ಯಾವುದೇ ರಿಯಾಯಿತಿ ಬೇಡ, ನ್ಯಾಯಯುತವಾಗಿ ಮನೆ ಹಂಚಿಕೆ ಮಾಡಿ ಎಂದು ಅಂಗಲಾಚುತ್ತಿದ್ದಾರೆ.

ಆದರೆ, ಎರಡು ವರ್ಷಗಳಿಂದ ಕಾಯುತ್ತಿರುವ ಇವರಿಗೆ ಸರ್ಕಾರದಿಂದ ಸಿಕ್ಕಿದ್ದು ಬರೀ ಭರವಸೆಗಳು ಮಾತ್ರ. ಹಣ ಪಾವತಿಸಲು ಸಿದ್ಧರಿದ್ದರೂ, ಕಾನೂನು ಬದ್ಧವಾಗಿ ಅರ್ಜಿ ಸಲ್ಲಿಸಿದ್ದರೂ ಇವರನ್ನು ಕಡೆಗಣಿಸಿ, ಅಕ್ರಮ ಎಸಗಿದವರಿಗೆ ಮಣೆ ಹಾಕುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂಬುದು ಯಕ್ಷಪ್ರಶ್ನೆಯಾಗಿದೆ.

ಅಂಕಿ ಅಂಶಗಳು ಬಿಚ್ಚಿಟ್ಟ ಕಟು ಸತ್ಯ

ರಾಜೀವ್ ಗಾಂಧಿ ವಸತಿ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳ ಅಂಕಿ-ಅಂಶಗಳನ್ನು ನೋಡಿದರೆ ಎಂಥವರಿಗೂ ಆಘಾತವಾಗುತ್ತದೆ. ಸೆಪ್ಟೆಂಬರ್ 2021 ರಿಂದ ಮಾರ್ಚ್ 2026ರ ಯೋಜನಾ ಅವಧಿಯವರೆಗೆ ವಸತಿಗಾಗಿ ಬರೋಬ್ಬರಿ 73,375 ಜನರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ.

ಆದರೆ, ಅಧಿಕಾರಿಗಳು ಮತ್ತು ವ್ಯವಸ್ಥೆಯ ಜಡತ್ವ ಎಷ್ಟಿದೆ ಎಂದರೆ, ನಾನಾ ಸಣ್ಣಪುಟ್ಟ ತಾಂತ್ರಿಕ ಕಾರಣಗಳನ್ನು ಒಡ್ಡಿ ಬರೋಬ್ಬರಿ 57,415 ಬಡವರ ಅರ್ಜಿಗಳನ್ನು ನಿರ್ದಯವಾಗಿ ತಿರಸ್ಕರಿಸಲಾಗಿದೆ. ಕೇವಲ 15,960 ಜನರನ್ನು ಮಾತ್ರ ಅರ್ಹರೆಂದು ಗುರುತಿಸಲಾಗಿದೆ. ಮುಂಗಡ ಹಣ ಪಾವತಿಸಿ, ಎಲ್ಲ ದಾಖಲೆಗಳನ್ನು ಸರಿಯಾಗಿ ಹೊಂದಿದ್ದರೂ ಸಹ ಕ್ಷುಲ್ಲಕ ಕಾರಣ ನೀಡಿ ಅರ್ಜಿಗಳನ್ನು ತಳ್ಳಿಹಾಕುತ್ತಿರುವುದು ಬಡವರ ಪಾಲಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಪ್ರಾಮಾಣಿಕತೆಗಿಲ್ಲ ಬೆಲೆ

ತೆರಿಗೆ ಪಾವತಿಸಿ, ಸರ್ಕಾರದ ನೀತಿ ನಿಯಮಗಳನ್ನು ಗೌರವಿಸುವ ನಾಗರಿಕರಿಗಿಂತ, ಸರ್ಕಾರಿ ಜಾಗವನ್ನು ಕಬಳಿಸುವವರಿಗೇ ಹೆಚ್ಚು ಸವಲತ್ತು ಸಿಗುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ. ಇದು ಸಮಾಜಕ್ಕೆ ತಪ್ಪು ಸಂದೇಶ ರವಾನಿಸಿದಂತಾಗುವುದಿಲ್ಲವೇ? ಕಾನೂನು ಉಲ್ಲಂಘಿಸಿದವರಿಗೆ ಸಿಗುವ ಆದ್ಯತೆ, ಕಾನೂನು ಪಾಲಿಸುವವರಿಗೆ ಏಕೆ ಸಿಗುತ್ತಿಲ್ಲ? ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು, ವರ್ಷಗಳಿಂದ ಕಾಯುತ್ತಿರುವ ಅರ್ಹ ಬಡ ಅರ್ಜಿದಾರರಿಗೆ ಕೂಡಲೇ ಮನೆ ಹಂಚಿಕೆ ಮಾಡಬೇಕಿದೆ ಎಂಬ ಒತ್ತಾಯ ಬಲವಾಗಿ ಕೇಳಿಬರುತ್ತಿದೆ.

ShareTweetSendShare
Join us on:

Related Posts

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ

by Shwetha
March 10, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ ಭಾರತೀಯರ ರಕ್ಷಣೆಗೆ ಸರ್ಕಾರ ಬದ್ಧ: ಜೈಶಂಕರ್

by Shwetha
March 10, 2026
0

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷದ ಹಿನ್ನೆಲೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಾರತೀಯರ ಸುರಕ್ಷತೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಅರಬ್ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ...

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

ದಾವಣಗೆರೆ ದಕ್ಷಿಣ ಟಿಕೆಟ್ ದಂಗಲ್ : ಎಲ್ಲಿಂದಲೋ ಬಂದ ಜಮೀರ್ ಗೆ ದಾವಣಗೆರೆ ಬಗ್ಗೆ ಮಾತಾಡಲು ಹಕ್ಕಿಲ್ಲ ಸಚಿವ ಮಲ್ಲಿಕಾರ್ಜುನ್ ಆಕ್ರೋಶ

by Shwetha
March 10, 2026
0

ಕರ್ನಾಟಕ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವದ ವಿಚಾರವಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟಗಳ ನಡುವೆಯೇ, ಇದೀಗ ನಾಯಕರ ನಡುವಿನ ಬಹಿರಂಗ ಕಚ್ಚಾಟ ತಾರಕಕ್ಕೇರಿದೆ. ಸಚಿವರು...

ಎಚ್ಚರಿಕೆ : ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ ನಡೆಸಿದರೆ ಕಠಿಣ ಜೈಲು ಶಿಕ್ಷೆ!

ಶಿಕ್ಷಣಕ್ಕೆ ಮೊದಲ ಆದ್ಯತೆ: ವರ್ಗಾವಣೆಗೊಂಡ ಶಿಕ್ಷಕರನ್ನು ಗಣತಿ ಕಾರ್ಯಗಳಿಗೆ ಬಳಸದಿರಲು ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶ

by Shwetha
March 10, 2026
0

ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಹಾಗೂ ಮಕ್ಕಳ ಭವಿಷ್ಯವನ್ನು ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ದಿಟ್ಟ ಹೆಜ್ಜೆಯನ್ನಿಟ್ಟಿದೆ. 2024-25ನೇ ಸಾಲಿನಲ್ಲಿ ವರ್ಗಾವಣೆಗೊಂಡಿರುವ ಸರ್ಕಾರಿ...

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram