ನಾಯಕತ್ವ ಬದಲಾವಣೆ ಚರ್ಚೆ ಇಲ್ಲ : ಜೆ.ಪಿ.ನಡ್ಡಾ J.P. Nadda
ಪಣಜಿ : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ರಾಜಕೀಯ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಗೋವಾದಲ್ಲಿ ಮಾತನಾಡಿರುವ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಅವರ ನಾಯಕತ್ವದದಲ್ಲಿ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ.
ಎಲ್ಲವನ್ನೂ ನಾವು ನೋಡುತ್ತಿದ್ದೇವೆ. ರಾಜಕೀಯ ಬೆಳವಣಿಗೆ ಹಾಗೂ ನಾಯತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಕಳೆದ ಕೆಲ ವಾರಗಳಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿತ್ತು. ಜುಲೈ 26ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದ್ರೆ ಇದೀಗ ಜೆ ಪಿ ನಡ್ಡಾ ಹೇಳಿಕೆ ಕುತೂಹಲ ಕೆರಳಿಸಿದೆ.