ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ ಹಾಕಿದ್ದಾರೆ
.
ಇದು ಸಂಪೂರ್ಣ ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿರುವ ಅವರು, ಕೇಂದ್ರ ಸರ್ಕಾರದ ಮುಂದೆ ಲಾಕ್ಡೌನ್ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದ್ದಾರೆ. ಜೊತೆಗೆ, ಯಾವುದೇ ರೀತಿಯ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.
ಹೀಗಾಗಿ ಜನರು ವದಂತಿಗಳಿಗೆ ಒಳಗಾಗದೆ ಅಧಿಕೃತ ಮಾಹಿತಿಯನ್ನೇ ನಂಬಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.







