ಮಾಸ್ಕೋ : ಇನ್ನು ಮುಂದೆ ರಷ್ಯಾದಲ್ಲಿ ಲಿಂಗ ಪರಿವರ್ತನೆಯ ಶಸ್ತ್ರಚಿಕಿತ್ಸೆ (Gender Reassignment Surgery) ಮಾಡಿಸಿಕೊಳ್ಳುವಂತಿಲ್ಲ ಎಂಬ ಕಾನೂನಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಸಹಿ ಹಾಕಿದ್ದಾರೆ.
ಮಕ್ಕಳ ಅಸಮರ್ಪಕ ಬೆಳವಣಿಗೆ ಮತ್ತು ಜನ್ಮ ದೋಷಗಳನ್ನು ಪರಿಹರಿಸಲು ಬಳಸುವ ವೈದ್ಯಕೀಯ ವಿಧಾನಗಳಿಗೆ ನಿರ್ಬಂಧ ಅನ್ವಯಿಸುವುದಿಲ್ಲ. ಲೈಂಗಿಕ ವ್ಯತ್ಯಾಸದ ಬಾಲ್ಯದ ಅಸ್ವಸ್ಥತೆಗಳಿಗೆ ಸಂಬಂಧಿಸಿದ ಆನುವಂಶಿಕ ಮತ್ತು ಅಂತಃಸ್ರಾವಕ ಸಮಸ್ಯೆಗಳಿಗೆ ಅನ್ವಯಿಸುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ.
ರಷ್ಯಾ ಸಮಾಜದ ಸಾಂವಿಧಾನಿಕ ನೈತಿಕ ತತ್ವಗಳು ಮತ್ತು ಕೌಟುಂಬಿಕ ಮೌಲ್ಯಗಳನ್ನು ಕಾಪಾಡಿಕೊಳ್ಳುವುದು. ದೇಶದ ಜನರ ಆರೋಗ್ಯವನ್ನು, ಅದರಲ್ಲೂ ವಿಶೇಷವಾಗಿ ಮಕ್ಕಳ ಆರೋಗ್ಯವನ್ನು ಕಾಪಾಡುವುದಾಗಿದೆ ಎಂದು ಸಚಿವಾಲಯ ಹೇಳಿದೆ.