ನವದೆಹಲಿ: ಸಂಸತ್ತಿನಲ್ಲಿ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ತೀವ್ರ ವಾಗ್ವಾದಕ್ಕಿಳಿದರು. ಜಾತಿ ಗೊತ್ತಿಲ್ಲದವರು ಜಾತಿ ಗಣತಿ ವಿಷಯದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದು ತೀವ್ರ ವಿರೋಧಕ್ಕೆ ಕಾರಣವಾಯಿತು. ಈ ವೇಳೆ ರಾಹುಲ್ ಗಾಂಧಿ ವಿರೋಧ ವ್ಯಕ್ತಪಡಿಸಿದರು.
ಜಾತಿ ಗಣತಿ ಬೇಡಿಕೆಯ ಮೇಲಿನ ಚರ್ಚೆ ಇಂದು ಲೋಕಸಭೆಯಲ್ಲಿ ವೈಯಕ್ತಿಕ ತಿರುವು ಪಡೆದುಕೊಂಡಿದ್ದು, ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಜಾತಿ ಗೊತ್ತಿಲ್ಲದವರು ಜಾತಿ ಎಣಿಕೆಯ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ಟೀಕೆ ಮಾಡಿದ್ದರಿಂದ ಅದಕ್ಕೆ ರಾಹುಲ್ ಗಾಂಧಿ ತಿರುಗೇಟು ನೀಡಿದರು. ನೀವು ನನ್ನನ್ನು ಅವಮಾನಿಸುತ್ತಲೇ ಇರಿ, ನಾನು ಹೋರಾಡುತ್ತಲೇ ಇರುತ್ತೇನೆ. ನಿಮ್ಮ ನಿಂದನೆಗೆ ನಾನು ಮರು ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ.
ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳ ಪರವಾಗಿ ಮಾತನಾಡುವ ಮತ್ತು ಅವರಿಗಾಗಿ ಹೋರಾಡುವವರನ್ನು ಅವಮಾನಿಸಲಾಗುತ್ತದೆ ಎಂದು ಹೇಳಿದರು. “ಅನುರಾಗ್ ಠಾಕೂರ್ ಅವರು ನನ್ನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.








