ಹಾಸನ, ಮೇ 16 : ಯಾರು ಎಲ್ಲಿ ಇದ್ದಾರೋ ಅವರು ಅಲ್ಲೇ ಇರಲಿ, ಹೊರ ರಾಜ್ಯದವರ ಸಹವಾಸ ನಮಗೆ ಬೇಡ ಎಂದು ಶಾಸಕ ಶಿವಲಿಂಗೇಗೌಡ ಹಾಸನದಲ್ಲಿ ಕೊರೊನಾ ಕುರಿತಂತೆ ನಡೆದ ಸಭೆಯಲ್ಲಿ ಹೇಳಿದರು.
ಹಾಸನದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿರುವ ಕಾರಣ, ಹೊರರಾಜ್ಯದಿಂದ ಹಾಸನಕ್ಕೆ ಬರುವವರಿಗೆ ಅವಕಾಶ ನೀಡದಂತೆ ಸಚಿವ ಮಾಧುಸ್ವಾಮಿ ಅವರಲ್ಲಿ ಮನವಿ ಮಾಡಿದರು. ಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ಕೊರೊನಾ ಸೋಂಕಿನ ಕುರಿತಂತೆ ನಡೆದ ಸಭೆಯಲ್ಲಿ ಮಾತನಾಡುತ್ತಾ ಹೊರರಾಜ್ಯದಿಂದ ಹಾಸನಕ್ಕೆ ಬರುವವರಿಗೆ ಅವಕಾಶ ನೀಡದಂತೆ ಸಚಿವರಲ್ಲಿ ಮನವಿ ಮಾಡಿದರು. ಮುಂಬೈನಿಂದ ಹಾಸನಕ್ಕೆ ಬಂದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಾಸನ ಗ್ರೀನ್ ಝೋನ್ ಪಟ್ಟ ಕಳೆದುಕೊಂಡಿದೆ. ಜಿಲ್ಲೆಯ ಜನ ಇದರಿಂದಾಗಿ ಆತಂಕಕ್ಕೆ ಒಳಗಾಗಿರುವ ವಿಚಾರವನ್ನು ಶಿವಲಿಂಗೇಗೌಡ ಅವರು ಈ ಸಂದರ್ಭದಲ್ಲಿ ಪ್ರಸ್ತಾಪಿಸಿದರು. ಕಳೆದ 25 ವರ್ಷಗಳಿಂದ ಮುಂಬೈಯಲ್ಲಿ ವಾಸವಿದ್ದವರು ಈಗ ನಮ್ಮ ಜಿಲ್ಲೆ ಸೇಫ್ ಆಗಿದೆ ಎಂದು ಇಲ್ಲಿಗೆ ಬರುತ್ತಿದ್ದಾರೆ. ಯಾರು ಎಲ್ಲಿ ಇದ್ದಾರೋ ಅವರು ಅಲ್ಲೇ ಇರಲಿ, ಹೊರ ರಾಜ್ಯದವರ ಸಹವಾಸ ನಮಗೆ ಬೇಡ. ಅವರ ಜೀವನ ಅಲ್ಲಿ ಉತ್ತಮವಾಗಿದ್ದು, ಜೀವ ಭಯದಿಂದ ಇಲ್ಲಿಗೆ ಬರಲು ಮುಂದಾಗಿದ್ದಾರೆ. ನಮಗೆ ನಮ್ಮ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವುದು ಮುಖ್ಯವಾಗಿದ್ದು, ಯಾವುದೇ ಕಾರಣಕ್ಕೂ ಬೇರೆ ರಾಜ್ಯದವರಿಗೆ ಬರಲು ಅವಕಾಶ ಕೊಡಬಾರದು ಎಂದು ಹೇಳಿದರು. ಮೋದಿ ಅವರು ಯಾವ ದೃಷ್ಟಿಕೋನದಿಂದ ಇದಕ್ಕೆ ಅವಕಾಶ ಕೊಟ್ಟಿದ್ದಾರೆ ಎಂದು ತಿಳಿಯುತ್ತಿಲ್ಲ. ಆದರೆ ನಮ್ಮ ಹಾಸನ ಸೇಫ್ ಆಗಬೇಕು ಎಂದರೆ ಜಿಲ್ಲಾಧಿಕಾರಿಗಳು ತಮ್ಮ ಅಧಿಕಾರವನ್ನು ಬಳಸಿಕೊಂಡು ಬೇರೆ ರಾಜ್ಯದವರು ಹಾಸನಕ್ಕೆ ಬರುವುದನ್ನು ತಡೆಯಬೇಕು ಎಂದು ಮನವಿ ಮಾಡಿದರು.
ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!
ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...








