Bengaluru: ಇಂದು ರಾತ್ರಿ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಬೈತಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ  ಮೆಟ್ರೊ ಸಂಚಾರ ಸ್ಥಗಿತ

1 min read
Metro Saaksha Tv

ಇಂದು ರಾತ್ರಿ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಬೈತಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ  ಮೆಟ್ರೊ ಸಂಚಾರ ಸ್ಥಗಿತ

ಬೆಂಗಳೂರು: ನಮ್ಮ ಮೆಟ್ರೊ ರೈಲಿನ ನೇರಳೆ ಮಾರ್ಗದ ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಬೈತಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಸಂಚಾರವನ್ನು ಇಂದು (ಏಪ್ರಿಲ್ 23) ರಂದು ಶನಿವಾರ ರಾತ್ರಿ 9:30 ಗಂಟೆಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.

ನಿಗಮವು ಇಂದು ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ, ಹೀಗಾಗಿ ಸ್ಥಗಿತಗೊಳಿಸಲಾಗುತ್ತಿದೆ.

Bengaluru Saaksha Tv

ಈ ಅವಧಿಯಲ್ಲಿ ವೇಳಾಪಟ್ಟಿಯ ಪ್ರಕಾರ ಪ್ರಯಾಣಿಕರಿಗೆ ಮೆಟ್ರೋ ಸೇವೆಯು ಎಂ.ಜಿ.ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಲಭ್ಯವಿರುತ್ತದೆ. ಕೆಂಗೇರಿ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಕಡೆಗೆ ಕೊನೆಯ ರೈಲು ರಾತ್ರಿ 9.30 ಗಂಟೆಗೆ ಹೊರಡುತ್ತದೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಕಡೆಗೆ ರಾತ್ರಿ 9.30 ಗಂಟೆಗೆ ಹೊರಡುತ್ತದೆ.

ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಹಸಿರು ಮಾರ್ಗದ ರೈಲುಗಳನ್ನು ಸಂಪರ್ಕಿಸಿದ ನಂತರ, ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿಗೆ ಕೊನೆಯ ರೈಲು  ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ರಾತ್ರಿ 9 ಗಂಟೆಗೆ ಹೊರಡಲಿದೆ. ಭಾನುವಾರದಂದು ಮೆಟ್ರೋ ಸೇವೆಯು ನೇರಳೆ ಮಾರ್ಗದಲ್ಲಿ ಪೂರ್ಣವಾಗಿ ಬೆಳಗ್ಗೆ 7 ಗಂಟೆಯಿಂದ ವೇಲಾಪಟ್ಟಿಯ ಪ್ರಕಾರ ರೈಲು ಸೇವೆಯು ಈ ಮಾರ್ಗದಲ್ಲಿ ಲಭ್ಯವಿರುತ್ತದೆ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd