ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಸುಳ್ಳು – ಡಾ ಸಿ ಎನ್ ಅಶ್ವತ್ಥನಾರಾಯಣ
ಕಾಲೇಜುಗಳಲ್ಲಿ ಮೊಬೈ ಲ್ ಬಳಕೆಗೆ ನಿಷೇಧ ಹೇರುತ್ತಾರೆ ಎನ್ನುವುದು ಸುಳ್ಳು ಸುದ್ಧಿ ಎಂದು ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವತ್ ನಾರಾಯಣ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು ಲ್ಯಾಪ್ ಟಾಪ್ ಮೊಬೈಲ್ ಕಂಪ್ಯೂಟರ್ ಕಲಿಕೆಯ ಅವಿಭಾಜ್ಯ ಅಂಗವಾಗಿವೆ, ಈಗಿರುವಾಗ ನಿಷೇಧದ ಮಾತು ಎಲ್ಲಿಂದ ಬರುತ್ತದೆ ಎಂದು ಅವರು ಪ್ರಶ್ನಿಸಿದರು.
ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆಗೆ ನಿಷೇಧ ಹೇರುತ್ತಾರೆ ಎನ್ನುವುದು ಗಾಳಿಸುದ್ದಿ ಎಂದು ತಳ್ಳಿಹಾಕಿದರು. ಇಂತಹ ಮಾತುಗಳನ್ನ ಪೋಷಕರು ವಿದ್ಯಾರ್ಥಿಗಳು ನಂಬಬಾರದು ಆಧುನಿಕ ಸಾಧನಗಳನ್ನ ಬಳಸಿಕೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆ, ಶಿಕ್ಷಣ ಪೂರೈಸುವುದು ಸರ್ಕಾರದ ಆದ್ಯತೆಯಾಗಿ ಮೊಬೈಲ್ ಬಳಕೆ ಎಂದಿನಂತೆ ಮುಂದುವರೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವರು ಸ್ಪಷ್ಟ ಪಡಿಸಿದ್ದಾರೆ..